Monday, Sep 16 2019 | Time 12:10 Hrs(IST)
 • ತ್ರಿಪುರಾದಲ್ಲಿ ಅಗ್ಗದ ದರದಲ್ಲಿ ಈರುಳ್ಳಿ ಪೂರೈಕೆ: ಮನೋಜ್ ಕಾಂತಿ ದೇಬ್
 • ಭಾರತದಲ್ಲಿ ಎಸ್ -400 ವಾಯು ರಕ್ಷಣಾ ವ್ಯವಸ್ಥೆ ಉತ್ಪಾದನೆ ಬಗ್ಗೆ ರಷ್ಯಾ ಪರಿಶೀಲನೆ-ರೋಸ್ಟೆಕ್ ಸಿಇಒ
 • ಕೆ ಎಸ್‍ ಈಶ್ವರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ: ಎಸ್‍ಡಿಪಿಐ
 • ಬಲವಂತದ ಭಾಷೆ ಹೇರಿಕೆ ಸಲ್ಲದು: ಸಿದ್ದರಾಮಯ್ಯ
 • ದೇಶದಲ್ಲಿ ಮಳೆಯಿಂದ ಈ ವರ್ಷ 1,422 ಜನರ ಸಾವು: ವರದಿ
 • ಪಂಕಜ್ ಅಡ್ವಾನಿಯ ಸ್ಥಿರ ಪ್ರದರ್ಶನ ಶ್ಲಾಘನೀಯ: ಮೋದಿ
 • ಬೇಗೂರು ಪೊಲೀಸರಿಂದ ರೌಡಿ ಶೀಟರ್ ಓಣಿ ಶ್ರೀಧರ್ ಕಾಲಿಗೆ ಗುಂಡೇಟು
 • ಪಾಕಿಸ್ತಾನದಲ್ಲಿ ಭದ್ರತೆ ಪರಿಶೀಲಿಸಿದ ನಂತರ ಪಂದ್ಯದ ಅಧಿಕಾರಿಗಳ ನೇಮಕ: ಐಸಿಸಿ
 • 47 ವರ್ಷಗಳ ಬಳಿಕ ಆ್ಯಷಸ್‌ ಟೆಸ್ಟ್ ಸರಣಿ ಡ್ರಾ
 • ಬಂಜಾ ಲುಕಾ ಚಾಲೆಂಜರ್‌: ರನ್ನರ್ ಅಪ್‌ಗೆ ತೃಪ್ತಿಪಟ್ಟ ಸುಮಿತ್‌ ನಗಾಲ್‌
 • ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ನಾಲ್ವರು ಯೋಧರಿಗೆ ಗಾಯ
Karnataka Share

ಅಕ್ರಮ ಸಂಪತ್ತು; ಮಾಜಿ ಕುಲಪತಿ ಸೇರಿ ಮೂವರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಅಕ್ರಮ ಸಂಪತ್ತು; ಮಾಜಿ ಕುಲಪತಿ ಸೇರಿ ಮೂವರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ಅಕ್ರಮ ಸಂಪತ್ತು; ಮಾಜಿ ಕುಲಪತಿ ಸೇರಿ ಮೂವರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು, ಜೂ12 (ಯುಎನ್ಐ) ಭ್ರಷ್ಟಾಚಾರ ನಿಗ್ರಹ ದಳ- ಎಸಿಬಿ ಪೊಲೀಸರು ಭ್ರಷ್ಟಾಚಾರ ವಿರುದ್ಧದ ಹೋರಾಟವನ್ನು ಮುಂದುವರಿಸಿದ್ದು, ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿ, ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಸೇರಿ ಮೂವರು ಸರ್ಕಾರಿ ಅಧಿಕಾರಿಗಳನ್ನು ಬಲೆಗೆ ಕೆಡವಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಪತ್ತೆ ಹಚ್ಚಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯ ಮಾಜಿ ಕುಲಪತಿ ಪ್ರೊ. ಕಲ್ಲಪ್ಪ ಎಂ.ಹೊಸಮನಿ, ಉತ್ತರ ಕನ್ನಡ ಜೊಯ್ಡಾ ಉಪ ವಲಯದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಉದಯ್ ಡಿ.ಚಬ್ಬಿ ಮತ್ತು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರ ಮಹದೇವಪ್ಪ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 11 ಕಡೆ ಸ್ಥಳಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ

ಧಾರವಾಡ ಮೂಲದ ಪ್ರೊಫೆಸರ್ ಕಲ್ಲಪ್ಪ ಎಂ.ಹೊಸಮನಿ ಅವರನ್ನು ಈ ಹಿಂದೆಯೇ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಅಮಾನತುಗೊಳಿಸಲಾಗಿತ್ತು. ಬಳಿಕ ಅವರನ್ನು ರಾಸಾಯನ ಶಾಸ್ತ್ರ ಪ್ರೊಫೆಸರ್ ಆಗಿ ನೇಮಕಗೊಳಿಸಲಾಗಿತ್ತು. ಹೊಸಮನಿ ಅವರ ನಿವಾಸ ಹಾಗೂ ಗುಲಗಂಜಿಕೊಪ್ಪದಲ್ಲಿರುವ ಅವರ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅವರಿಗೆ ಧಾರವಾಡದಲ್ಲಿ ನಾಲ್ಕು ಮನೆಗಳಿದ್ದು, ಅವುಗಳ ಮೇಲೆಯೂ ದಾಳಿ ನಡೆದಿದೆ.

ಹೊಸಮನಿ ಅವರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿರುವ ಉದಯ್ ಡಿ.ಚಬ್ಬಿ ಅವರ ನಿವಾಸ ಹಾಗೂ ದಾಂಡೇಲಿಯಲ್ಲಿರುವ ಎರಡು ಕಚೇರಿಗಳ ಮೇಲೆ ಎಸಿಬಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಸಹಾಯಕ ಅಭಿಯಂತರರಾಗಿರುವ ಮಹದೇವಪ್ಪ ಅವರ ಬೆಂಗಳೂರಿನ ಸಿದ್ದೇಹಳ್ಳಿಯಲ್ಲಿರುವ ನಿವಾಸ, ಮಂಗಳೂರಿನ ಕದ್ರಿಯಲ್ಲಿರುವ ನಿವಾಸ ಹಾಗೂ ಚಿತ್ರದುರ್ಗದ ಕಣಿವೆ ಹಳ್ಳಿಯಲ್ಲಿರುವ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದಾರೆ ಎಂದು ಎಸಿಬಿ ಮೂಲಗಳು ಸ್ಪಷ್ಟಪಡಿಸಿವೆ.

ಯುಎನ್ಐ ಎಎಚ್ ಕೆಎಸ್ಆರ್ 1733

More News
ಬಲವಂತದ ಭಾಷೆ ಹೇರಿಕೆ ಸಲ್ಲದು: ಸಿದ್ದರಾಮಯ್ಯ

ಬಲವಂತದ ಭಾಷೆ ಹೇರಿಕೆ ಸಲ್ಲದು: ಸಿದ್ದರಾಮಯ್ಯ

16 Sep 2019 | 11:38 AM

ಮೈಸೂರು, ಸೆ 16 (ಯುಎನ್ಐ) ಯಾವುದೇ ಭಾಷಾ ಕಲಿಕೆಗೆ ನಮ್ಮ ವಿರೋಧವಿಲ್ಲ, ಆದರೆ ಯಾವುದೇ ಭಾಷೆ ಬಲವಂತದ‌ ಹೇರಿಕೆಯಾಗಬಾರದು ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

 Sharesee more..
ಬೇಗೂರು ಪೊಲೀಸರಿಂದ ರೌಡಿ ಶೀಟರ್ ಓಣಿ ಶ್ರೀಧರ್ ಕಾಲಿಗೆ ಗುಂಡೇಟು

ಬೇಗೂರು ಪೊಲೀಸರಿಂದ ರೌಡಿ ಶೀಟರ್ ಓಣಿ ಶ್ರೀಧರ್ ಕಾಲಿಗೆ ಗುಂಡೇಟು

16 Sep 2019 | 11:31 AM

ಬೆಂಗಳೂರು, ಸೆ 16 (ಯುಎನ್ಐ) ರೌಡಿಶೀಟರ್ ಶ್ರೀಧರ್ ಅಲಿಯಾಸ್ ಓಣಿ ಶ್ರೀಧರ್ ಎಂಬಾತನ ಮೇಲೆ ಬೇಗೂರು ಪೊಲೀಸರು ಭಾನುವಾರ ತಡ ರಾತ್ರಿ ಗುಂಡು ಹಾರಿಸಿ ಬಂಧಿಸಿದ್ದಾರೆ

 Sharesee more..