Wednesday, Feb 26 2020 | Time 10:45 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಅಗರ್ತಲಾ ಗಡಿಯಲ್ಲಿ ಬಿಎಸ್ ಎಫ್ ಪಡೆಗಳಿಂದ 2.267 ಕೆ.ಜಿ ಚಿನ್ನದ ಬಿಸ್ಕತ್ ವಶ

ಅಗರ್ತಲಾ, ಜ 9(ಯುಎನ್‍ಐ)- ಬಾಂಗ್ಲಾ ಗಡಿಯ ಜೋಯ್‍ಪುರದಲ್ಲಿ ವಾಸವಾಗಿರುವ ಭಾರತೀಯ ಪ್ರಜೆಯೊಬ್ಬನಿಂದ ಗಡಿ ಭದ್ರತಾ ಪಡೆ ( ಬಿಎಸ್ ಎಫ್) ಯೋಧರು 96 ಲಕ್ಷ ರೂ ಮೌಲ್ಯದ 2.267 ಕೆ.ಜಿ ತೂಕದ ಚಿನ್ನದ ಬಿಸ್ಕತ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ನಿರ್ದಿಷ್ಟ ಮಾಹಿತಿಯಂತೆ ಪಶ್ಚಿಮ ಅಗರ್ತಲಾ ಪೊಲೀಸ್ ಠಾಣೆ ವ್ಯಾಪ್ತಿಯ ಪಶ್ಚಿಮ ಜೋಯ್‍ನಗರದ ಬಿಎಸ್ ಎಫ್ ಪಡೆಗಳು ಅಂತಾರಾಷ್ಟ್ರೀಯ ಗಡಿಯಲ್ಲಿ ಬುಧವಾರ ಕಾರ್ಯಾಚರಣೆ ನಡೆಸಿದ್ದವು.
ಮಧ್ಯಾಹ್ನ ಕಾರ್ಯಾಚರಣೆ ನಡೆಸುತ್ತಿದ್ದಾಗ ಶಂಕಿತ ವ್ಯಕ್ತಿ ಜಾಯ್‍ಪುರದಿಂದ ಗಡಿಯತ್ತ ಬರುತ್ತಿರುವುದನ್ನು ಬಿಎಸ್ ಎಫ್ ಸೈನಿಕರು ಗಮನಿಸಿದ್ದಾರೆ.
ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಿಸಿದಾಗ, ತಾನು ಜಾಯ್‍ಪುರ ನಿವಾಸಿ ಜಹಂಗೀರ್ ಮಿಯಾ(52) ಎಂದು ಗುರುತಿಸಿಕೊಂಡಿದ್ದಾನೆ. ನಂತರ ಆತನನ್ನು ಶೋಧಿಸಿದಾಗ 4 ಚಿನ್ನದ ಬಿಸ್ಕತ್ ಗಳು ಕಂಡುಬಂದಿವೆ. ವಶಪಡಿಸಿಕೊಂಡ ಚಿನ್ನದ ಬಿಸ್ಕತ್ ಗಳನ್ನು ಸುಂಕ ಇಲಾಖೆಗೆ ಒಪ್ಪಿಸಲಾಗಿದೆ.
ಯುಎನ್‍ಐ ಎಸ್ ಎಲ್‍ಎಸ್ 1059