Monday, Aug 3 2020 | Time 23:25 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Special Share

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ !

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ  ೨೦ ಚಿನ್ನದ  ಬಿಸ್ಕೆಟ್  !
ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ ...!

ತಿರುಮಲ, ಜುಲೈ ೧೨(ಯುಎನ್‌ಐ) ತಿರುಮಲ- ತಿರುಪತಿ ದೇವಸ್ಥಾನ ಆಸ್ತಿ ಪಾಸ್ತಿಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿದ ನಂತರ ಶ್ವೇತ ಪತ್ರ ಪ್ರಕಟಿಸಲಾಗುವುದು ಎಂದು ಟಿಟಿಡಿ ಇ ಓ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ ತಿಳಿಸಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬ್ರಹ್ಮೋತ್ಸವ ನಡೆಯುವ ಸಮಯದಲ್ಲಿ ಪರಿಸ್ಥಿತಿ ಹೇಗಿರುತ್ತದೋ ಈಗಲೇ ಹೇಳಲಾಗದು. ಪ್ರಸ್ತುತ ಬ್ರಹ್ಮೋತ್ಸವಗಳಿಗೆ ಟಿಟಿಡಿ ಟೆಂಡರ್ ಕರೆದಿದೆ ಎಂದು ಹೇಳಿದರು.

ಯಾವುದೇ ವಿವಾದಗಳಿಗೆ ಆಸ್ಪದ ನೀಡದೆ ಸಂಪೂರ್ಣ ಪರಿಶೀಲನೆ ನಡೆಸಿದ ನಂತರ ಶ್ವೇತ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಜೂನ್ ೧೧ ರಿಂದ ಜುಲೈ ೧೦ರವರೆಗೆ ತಿಮ್ಮಪ್ಪನ ಹುಂಡಿ ಆದಾಯ ೧೬.೭೩ ಕೋಟಿ ರೂ ಸಂಗ್ರಹವಾಗಿದೆ ಎಂದು ಇ ಓ ತಿಳಿಸಿದ್ದಾರೆ. ಭಕ್ತರು ಮುಡಿ ಸಮರ್ಪಣೆಯಿಂದ ೭ ಕೋಟಿ ರೂ ಹೆಚ್ಚುವರಿ ಆದಾಯ ಸಂಗ್ರಹವಾಗಿದೆ ಎಂದು ಹೇಳಿದರು

ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ಹುಂಡಿಗೆ ಅಜ್ಞಾತ ಭಕ್ತರೊಬ್ಬರು ಚಿನ್ನದ ಬಿಸ್ಕೆಟ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಒಂದೊಂದು ೧೦೦ ಗ್ರಾಮ್ ತೂಕವಿರುವ ೨೦ ಚಿನ್ನದ ಬಿಸ್ಕೆಟ್ ಗಳನ್ನು ಸಮರ್ಪಿಸಿರುವ ವಿಷಯ ಬೆಳಕಿಗೆ ಬಂದಿದೆ.

ಯುಎನ್‌ಐ ಕೆವಿಆರ್ ೧೭೩೫