Monday, Jul 22 2019 | Time 07:09 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
Karnataka Share

ಅತೃಪ್ತ ಶಾಸಕರ ರಾಜೀನಾಮೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ನಿರ್ದೇಶನ

ನವದೆಹಲಿ, ಜುಲೈ 12 (ಯುಎನ್ಐ) ರಾಜಿನಾಮೆ ಅಂಗೀಕಾರ ಮಾಡಲು ಸ್ಪೀಕರ್ ತಡ ಮಾಡುತ್ತಿದ್ದಾರೆ ಎಂದು ಕರ್ನಾಟಕದ 10 ಮಂದಿ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಬಂಡಾಯ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದುವರೆಸಿದ ಸುಪ್ರೀಂಕೋರ್ಟ್, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸ್ಪೀಕರ್ ಗೆ ಶುಕ್ರವಾರ ಸೂಚನೆ ನೀಡಿದೆ.
ಈ ಅವಧಿಯಲ್ಲಿ ಶಾಸಕರ ರಾಜಿನಾಮೆ ಅಂಗೀಕಾರ ಮಾಡಬಾರದು ಮತ್ತು ಅನರ್ಹಗೊಳಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ನಿರ್ದೇಶನ ನೀಡಿದೆ.
ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ. ಶಾಸಕರು ಮತ್ತು ಸರ್ಕಾರ ಎಲ್ಲವೂ ಸದ್ಯಕ್ಕೆ ನಿರಾಳ ಎನ್ನುವಂತಾಗಿದೆ. ಬಂಡಾಯ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೊಹಟಗಿ ವಾದ ಮಂಡಿಸಿದರು.
ಈ ನಡುವೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದರೆ.
ಯುಎನ್ಐ ಕೆಎಸ್ ಆರ್ ಜಿಎಸ್ಆರ್ 1329