Wednesday, Feb 26 2020 | Time 10:50 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಅಪರಾಧ ವಿಷಯಗಳಲ್ಲಿ ಪರಸ್ಪರ ಕಾನೂನು ನೆರವಿಗಾಗಿ ಬ್ರೆಜಿಲ್ ಜತೆ ಒಪ್ಪಂದಕ್ಕೆ ಸಚಿವ ಸಂಪುಟ ಒಪ್ಪಿಗೆ

ಅಪರಾಧ ವಿಷಯಗಳಲ್ಲಿ ಪರಸ್ಪರ ಕಾನೂನು ನೆರವಿಗಾಗಿ ಬ್ರೆಜಿಲ್ ಜತೆ ಒಪ್ಪಂದಕ್ಕೆ ಸಚಿವ ಸಂಪುಟ ಒಪ್ಪಿಗೆ
ಅಪರಾಧ ವಿಷಯಗಳಲ್ಲಿ ಪರಸ್ಪರ ಕಾನೂನು ನೆರವಿಗಾಗಿ ಬ್ರೆಜಿಲ್ ಜತೆ ಒಪ್ಪಂದಕ್ಕೆ ಸಚಿವ ಸಂಪುಟ ಒಪ್ಪಿಗೆ

ನವದೆಹಲಿ, ಜ22(ಯುಎನ್‍ಐ)_ ಅಪರಾಧ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗಳು ಮತ್ತಷ್ಟು ಪರಿಣಾಮಕಾರಿಯಾಗುವ ಗುರಿಯೊಂದಿಗೆ ಭಾರತ ಮತ್ತು ಬ್ರೆಜಿಲ್ ನಡುವೆ ಪರಸ್ಪರ ಕಾನೂನು ನೆರವು ಮತ್ತು ಸಹಕಾರಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ , ಕ್ರಿಮಿನಲ್ ವಿಷಯಗಳಲ್ಲಿ ಎರಡೂ ದೇಶಗಳ ಒಪ್ಪಂದ ಕುರಿತಂತೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.

ಅಪರಾಧ ವ್ಯಾಪಕತೆ ಮತ್ತು ಇದು ಭಯೋತ್ಪಾದನೆಯೊಂದಿಗೆ ಜೋಡಣೆಯಾಗುತ್ತಿರುವ ಸನ್ನಿವೇಶದಲ್ಲಿ ಉದ್ದೇಶಿತ ಒಪ್ಪಂದವು ಬ್ರೆಜಿಲ್ ನೊಂದಿಗೆ ದ್ವಿಪಕ್ಷೀಯ ಸಹಕಾರಕ್ಕೆ ಕಾನೂನು ಕಾರ್ಯಚೌಕಟ್ಟು ರೂಪಿಸಲು ಸಹಕಾರಿಯಾಗಲಿದೆ. ವಿವಿಧ ಸ್ವರೂಪಗಳ ಅಪರಾಧಗಳನ್ನು ತಡೆಯಲು ಮತ್ತು ಈ ಪ್ರಕರಣಗಳ ಪರಿಣಾಮಕಾರಿ ತನಿಖೆಗೆ ಒಪ್ಪಂದಕ್ಕೂ ಸಹಕಾರಿಯಾಗಲಿದೆ ಎಂದು ಜಾವಡೇಕರ್ ಹೇಳಿದ್ದಾರೆ.

ತೈಲ ಮತ್ತು ನೈಸರ್ಗಿಕ ಅನಿಲ ವಲಯದಲ್ಲೂ ಸಹಕಾರಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಯುಎನ್‍ಐ ಎಸ್‍ಎಲ್‍ಎಸ್ 1750