Wednesday, Feb 26 2020 | Time 10:45 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಅಫಿಡವಿಟ್ ಸಲ್ಲಿಸಲು ಸಮಾಜ‌ ಪರಿವರ್ತನ ಸಮುದಾಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ, ಜ 7 (ಯುಎನ್ಐ) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಚಿವ ಡಿ.ಕೆ.‌ಶಿವಕುಮಾರ್ ವಿರುದ್ಧ ದಾಖಲಾಗಿರುವ ಬೆನ್ನಿಗಾನ ಹಳ್ಳಿ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಪ್ರಮಾಣಪತ್ರ ಸಲ್ಲಿಸಲು ಅರ್ಜಿದಾರರಾದ ಸಮಾಜ‌ ಪರಿವರ್ತನ ಸಮುದಾಯಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಅರ್ಜಿದಾರ ಎಸ್.ಆರ್ ಹಿರೇಮಠ ಪರ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ ಮಂಗಳವಾರ, ಲೋಕಾಯುಕ್ತದಲ್ಲಿ ಸಲ್ಲಿಸಿದ ದೂರಿನ ಪ್ರತಿಯೊಂದಿಗೆ ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿದೆ.
ಪ್ರಕರಣದ ಕುರಿತು ಮೇಲ್ಮನವಿ ಸಲ್ಲಿಸುವಲ್ಲಿ ವಿಳಂಬವಾದುದೇಕೆ ಎಂಬುದರ ಕುರಿತು ಸಂಪೂರ್ಣ ವಿವರ ನೀಡುವಂತೆ ನ್ಯಾಯಪೀಠ ಸೂಚನೆ ನೀಡಿದೆ.
ಹೈಕೋರ್ಟ್ ಪ್ರಕರಣ ಸಂಬಂಧ 2015ರ ಡಿಸೆಂಬರ್ 18ರಂದು ತೀರ್ಪು ನೀಡಿತ್ತು. ಈ ಸಂಬಂಧ ಕಬ್ಬಾಲೆಗೌಡ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ನಂತರ ಹಿರೇಮಠ್ ಪ್ರಕರಣದಲ್ಲಿ ಭಾಗಿಯಾಗಲು ಅನುಮತಿ ಕೇಳಿ, ಪ್ರಕರಣವನ್ನು ಮರು ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ಯಡಿಯೂರಪ್ಪ ಮತ್ತು ಶಿವಕುಮಾರ್ ಪರ ವಕೀಲರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕ್ರಿಮಿನಲ್ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಯ ಮಧ್ಯಪ್ರವೇಶದಿಂದ ಪೂರ್ಣಗೊಂಡಿರುವ ವಿಚಾರಣೆಯನ್ನು ಮತ್ತೊಮ್ಮೆ ಆರಂಭಿಸಲು ಅವಕಾಶವಿಲ್ಲ ಎಂದು ವಾದಿಸಿದ್ದರು.
ಕರ್ನಾಟಕ ಭೂ ವರ್ಗಾವಣೆ ನಿರ್ಬಂಧ ಕಾಯ್ದೆ 1991 ಅನ್ನು ಉಲ್ಲಂಘಿಸಿ 4.2 ಎಕರೆ ಜಮೀನನ್ನು ಭೂ ಪರಿವರ್ತನೆ ಮಾಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಯುಎನ್ಐ ಎಸ್ಎಚ್ 1237