Sunday, Mar 29 2020 | Time 00:05 Hrs(IST)
National Share

ಅಭಿವೃದ್ಧಿಗೆ ಎಲ್ಲ ಭಾಗೀದಾರರ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯ-ವೆಂಕಯ್ಯನಾಯ್ಡು

ಕೋಲ್ಕತ್ತ ಫೆ 16 (ಯುಎನ್‌ಐ)-ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಲು ಜನರ ಪಾಲ್ಗೊಳ್ಳುವಿಕೆ, ಎಲ್ಲ ಭಾಗೀದಾರರು ಮತ್ತು ಖಾಸಗಿ ವಲಯದ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯವಾಗಿದ್ದು, ಇದರಿಂದ ಬೆಳವಣಿಗೆ ವೇಗ ಪಡೆಯಲಿದೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಹೇಳಿದ್ದಾರೆ
ಭಾರತ ರೋಟರಿ ಶತಮಾನೋತ್ಸವದ ಅಂಗವಾಗಿ ನಗರದಲ್ಲಿ ಇಂದು ಆಯೋಜಿಲಾಗಿದ್ದ ಶೃಂಗಸಭೆ 2020 ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಮಾರೋಪ ಸಮಾರಂಭದಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಉಪಸ್ಥಿತರಿದ್ದರು.
ಇದಕ್ಕೂ ಕೇಂದ್ರ ಸಚಿವರಾದ ದಬೇಶ್ರೀ ಚೌಧರಿ, ಬ್ರಾತ್ಯ ಬಸು ಮತ್ತು ಹಿರಿಯ ಅಧಿಕಾರಿಗಳು ವೆಂಕಯ್ಯನಾಯ್ಡು ಅವರನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.ಉಪರಾಷ್ಟ್ರಪತಿಯವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು. ಈ ವೇಳೆ ಸ್ವಾಗತಿಸಿದ ರೋಟರಿ ಅಂತಾರಾಷ್ಟ್ರೀಯ ಅಧ್ಯಕ್ಷ ಶೇಖರ್ ಮೆಹ್ತಾ ಅವರು, ರೋಟರಿ ಸಂಸ್ಥೆ, ಶಾಂತಿ, ಸ್ವಚ್ಛ ನೀರು, ನೈರ್ಮಲ್ಯ ಮತ್ತು ತಡೆಗಟ್ಟಬಹುದಾದ ರೋಗಗಳ ಬಗ್ಗೆ ಭಾರತ ಸೇರಿದಂತೆ ವಿದೇಶಗಳಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಎಂದು ವಿವರಿಸಿದರು.
ಸಮಾರಂಭದಲ್ಲಿ ನಾಯ್ಡು ಮತ್ತು ರಾಜ್ಯಪಾಲರನ್ನು ಸನ್ಮಾನಿಸಲಾಯಿತು.
ಯುಎನ್ಐ ಎಸ್ಎಲ್ಎಸ್ 1017
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..