Sunday, Mar 29 2020 | Time 00:39 Hrs(IST)
National Share

ಅಮಿತ್ ಶಾ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಟ ಮಹಿಳೆಯರನ್ನು ತಡೆದ ಪೊಲೀಸರು

ನವದೆಹಲಿ, ಫೆ 16 (ಯುಎನ್ಐ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದವರೆಗೆ ಮೆರವಣಿಗೆ ಹೊರಟಿದ್ದ ದೆಹಲಿಯ ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನಾನಿರತ ಮಹಿಳೆಯರನ್ನು ಪೊಲೀಸರು ಮಧ್ಯದಲ್ಲೇ ತಡೆಹಿಡಿದಿದ್ದಾರೆ.
ಈ ಮಹಿಳೆಯರು ಪ್ರತಿಭಟನಾ ಮೆರವಣಿಗೆ ನಡೆಸಲು ಮತ್ತು ಗೃಹ ಸಚಿವರನ್ನು ಭೇಟಿ ಮಾಡಲು ಪೂರ್ವಾನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಹಿಳೆಯರನ್ನು ಕೇಳಿದಾಗ, ಅನುಮತಿ ಕೋರಿ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದರು.
ಪ್ರತಿಭಟನಾ ನಿರತ ಮಹಿಳೆಯರನ್ನು ತಡೆದ ಪೊಲೀಸರು, ಕೆಲವರನ್ನು ಮಾತ್ರ ಕಳುಹಿಸುವುದಾಗಿ ತಿಳಿಸಿದ್ದರು. ಆದರೆ, ಇದಕ್ಕೆ ಮಹಿಳೆಯರು ನಿರಾಕರಿಸಿದ್ದರು. ತಮ್ಮಲ್ಲಿ ಯಾವುದೇ ನಾಯಕರಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.
ಗುರುವಾರ ಅಮಿತ್ ಶಾ, ಸಿಎಎ ಬಗ್ಗೆ ಚರ್ಚಿಸುವವರು ತಮ್ಮನ್ನು ಭೇಟಿ ಮಾಡಬಹುದು. ಇದಕ್ಕಾಗಿ ತಮ್ಮ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹೇಳಿದ್ದರು.
ಯುಎನ್ಐ ಎಸ್ಎಚ್ 1744
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..