Sunday, Mar 29 2020 | Time 00:12 Hrs(IST)
National Share

ಅಮಿತ್ ಷಾ ವಜಾ, ರಾಷ್ಟ್ರಪತಿಗೆ ಕಾಂಗ್ರೆಸ್ ನಿಯೋಗ ಆಗ್ರಹ

ನವದೆಹಲಿ, ಫೆ 27 (ಯುಎನ್ಐ) ದೆಹಲಿ ಗಲಭೆ ಹಿಂಸಾಚಾರ ನಿಯಂತ್ರಿಸಲು ಅಸಮರ್ಥರಾದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಪದವಿಯಿಂದ ಕೂಡಲೇ ವಜಾಗೊಳಿಸುವಂತೆ ಕಾಂಗ್ರೆಸ್ ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಗ್ರಹಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಪಕ್ಷದ ನಿಯೋಗ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದೆ.
''ನಾಗರಿಕರ ಜೀವ, ಸ್ವಾತಂತ್ರ್ಯ ಹಾಗೂ ಸೊತ್ತಿನ ಸಂರಕ್ಷಣೆಯ ಖಾತರಿ ನೀಡಬೇಕೆಂದು ನಿಯೋಗ ಆಗ್ರಹಿಸಿದೆ. ಎಂದು ನಂತರ ಸೋನಿಯಾ ಗಾಂಧಿ ಅವರು ರಾಷ್ಟ್ರಪತಿ ಭವನದ ಬಳಿ ಸುದ್ದಿಗಾರರಿಗೆ ತಿಳಿಸಿದರು.
ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಅಸಮರ್ಥರಾದ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ವಜಾಗೊಳಿಸಬೇಕೆಮಬ ಪಕ್ಷದ ಬೇಡಿಕೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಅವರು ಹೇಳಿದರು.
ನಿಯೋಗದಲ್ಲಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾತನಾಡಿ 'ರಾಜಧರ್ಮ'ವನ್ನು ರಕ್ಷಿಸಲು ತಮ್ಮ ಅಧಿಕಾರ ಬಳಸುವ ಬಗ್ಗೆ ಪಕ್ಷ ಕೋವಿಂದ್ ಅವರನ್ನು ಒತ್ತಾಯಿಸಲಾಗಿದೆ ಎಂದು ಹೇಳಿದರು.
ಯುಎನ್ಐ ಕೆಎಸ್ಆರ್
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..