Wednesday, Feb 26 2020 | Time 10:21 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಅಮೆರಿಕ ಅಧ್ಯಕ್ಷರಿಗೆ ಹೊಸ ವರ್ಷದ ಶುಭಕೋರಿದ ಮೋದಿ; ಸಂಬಂಧಗಳ ವೃದ್ಧಿಗೆ ಕರೆ

ನವದೆಹಲಿ, ಜ.7 (ಯುಎನ್ಐ) ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಹೊಸ ವರ್ಷದ ಶುಭಾಶಯ ಕೋರಿದ್ದು, ಪರಸ್ಪರ ಆಸಕ್ತಿಯ ಎಲ್ಲ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಪ್ರಕಟಣೆ ತಿಳಿಸಿದೆ.
ಅಧ್ಯಕ್ಷ ಟ್ರಂಪ್, ಅವರ ಕುಟುಂಬ ಮತ್ತು ಅಮೆರಿಕದ ಜನರಿಗೆ ಹೊಸ ವರ್ಷದಲ್ಲಿ ಉತ್ತಮ ಆರೋಗ್ಯ, ಸಮೃದ್ಧಿ ಮತ್ತು ಯಶಸ್ಸು ದೊರೆಯಲಿ ಎಂದು ಪ್ರಧಾನಿ ಹಾರೈಸಿದರು.
ವಿಶ್ವಾಸ, ಪರಸ್ಪರ ಗೌರವ ಮತ್ತು ತಿಳುವಳಿಕೆಯ ಮೇಲೆ ನೆಲೆ ನಿಂತಿರುವ ಭಾರತ-ಯುಎಸ್ ಸಂಬಂಧಗಳು ಇನ್ನಷ್ಟು ಗಟ್ಟಿಯಾಗಿ ಬೆಳೆದಿವೆ ಎಂದು ಮೋದಿ ಹೇಳಿದ್ದಾರೆ.
ಹಿಂದಿನ ವರ್ಷದಲ್ಲಿ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಆಳವಾಗಿಸುವಲ್ಲಿ ಸಾಧಿಸಿದ ಮಹತ್ವದ ಪ್ರಗತಿಯನ್ನು ಪ್ರಧಾನಿ ಪ್ರಸ್ತಾಪಿಸಿದರು. ಪರಸ್ಪರ ಹಿತಾಸಕ್ತಿಯ ಎಲ್ಲ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಅಧ್ಯಕ್ಷ ಟ್ರಂಪ್ ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರೆಸುವ ಇಚ್ಛೆಯನ್ನು ಮೋದಿ ವ್ಯಕ್ತಪಡಿಸಿದರು.
ಅಧ್ಯಕ್ಷ ಟ್ರಂಪ್ ಭಾರತದ ಜನರಿಗೆ ಹೊಸ ವರ್ಷದಲ್ಲಿ ಸಮೃದ್ಧಿ ಮತ್ತು ಪ್ರಗತಿಗೆ ಶುಭ ಹಾರೈಸಿದ್ದರು.
ಕಳೆದ ಕೆಲವು ವರ್ಷಗಳಲ್ಲಿ ಸಂಬಂಧದಲ್ಲಿನ ಸಾಧನೆಗಳ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು. ದ್ವಿಪಕ್ಷೀಯ ಸಹಕಾರವನ್ನು ಇನ್ನಷ್ಟು ಗಾಢವಾಗಿಸಲು ತಮ್ಮ ಸಿದ್ಧತೆಯನ್ನು ಪುನರುಚ್ಚರಿಸಿದರು.
ಯುಎನ್ಐ ಎಎಚ್ 1112