Friday, Feb 28 2020 | Time 09:47 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಅಮೆರಿಕ - ಇರಾನ್ ಉದ್ವಿಗ್ನತೆ: ರಾಜನಾಥ್ ಸಿಂಗ್ – ಮಾರ್ಕ್ ಎಸ್ಟರ್ ಮಾತುಕತೆ

ನವದೆಹಲಿ, ಜ 9 (ಯುಎನ್ಐ) ಅಮೆರಿಕದೊದಂದಿಗಿನ ಭದ್ರತಾ ಸಹಕಾರವನ್ನು ಭಾರತ ವಿಸ್ತರಿಸಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು ಈ ವಿಷಯ ಸ್ಪಷ್ಟಪಡಿಸಿದ್ದಾರೆ.

ನೂತನ ವರ್ಷದ ಶುಭ ಕೋರಿದ ಸಚಿವರು, ದ್ವಿಪಕ್ಷೀಯ ರಕ್ಷಣಾ ಸಹಕಾರ ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಕೊಲ್ಲಿ ಪ್ರದೇಶದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ಪಡೆದಿದ್ದು ಭಾರತದ ಕಾಳಜಿ ಮತ್ತು ಹಿತಾಸಕ್ತಿಗಳನ್ನು ಹಂಚಿಕೊಂಡಿರುವುದಾಗಿ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಈ ಮೊದಲು ರಾಜನಾಥ್ ಸಿಂಗ್ ಜಪಾನಿನ ರಕ್ಷಣಾ ಸಚಿವ ಟಾರೊ ಕೊನೊ ಅವರೊಂದಿಗೆ ದ್ವಿಪಕ್ಷೀಯ ಭದ್ರತಾ ಸಹಕಾರ ಹೆಚ್ಚಿಸುವ ಸಂಬಂಧ ಚರ್ಚೆ ನಡೆಸಿದ್ದರು.

ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಪ್ರಾದೇಶಿಕ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಸಚಿವರು ಮಾತುಕತೆ ನಡೆಸಿದ್ದಾರೆ.

ಯುಎನ್ಐ ಜಿಎಸ್ಆರ್ 2342