Sunday, Mar 29 2020 | Time 00:04 Hrs(IST)
National Share

ಅಯೋಧ್ಯಾ ದೇಗುಲ ಟ್ರಸ್ಟ್ ಗೂ ದೆಹಲಿ ಚುನಾವಣೆಗೂ ಸಂಬಂಧವಿಲ್ಲ; ಜಾವಡೇಕರ್

ನವದೆಹಲಿ, ಫೆ 5 (ಯುಎನ್ಐ) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗಾಗಿ ಟ್ರಸ್ಟ್ ರಚನೆ ಮಾಡುವ ಸಂಪುಟ ಸಭೆಯ ನಿರ್ಧಾರವನ್ನು ದೆಹಲಿ ಚುನಾವಣಾ ಪ್ರಚಾರಕ್ಕೆ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಸಂಪುಟ ಸಭೆಯ ನಿರ್ಧಾರಗಳ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಈ ನಿರ್ಧಾರಕ್ಕೂ ದೆಹಲಿ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಇಡೀ ದೇಶದಲ್ಲಿ ಚುನಾವಣೆ ನಡೆಯುತ್ತಿಲ್ಲ. ಸಂಪುಟ ಸಭೆಯಲ್ಲಿ ಅಯೋಧ್ಯೆಯ ರಾಮಮಂದಿರಕ್ಕಾಗಿ ಟ್ರಸ್ಟ್ ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಸುಖಾಸುಮ್ಮನೆ ಗೊಂದಲ ಸೃಷ್ಟಿಸುವುದು ಬೇಡ ಎಂದರು.
ದೆಹಲಿ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಿ ಈ ನಿರ್ಧಾರ ಕೈಗೊಂಡಿರುವುದೇಕೆ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.
ದೆಹಲಿಯಲ್ಲಿ ಫೆ. 8ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆ. 11ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯದ ಮೇಲ್ವಿಚಾರಣೆಗೆ ಟ್ರಸ್ಟ್ ರಚಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದಾಗಿ ಪ್ರಕಟಿಸಿದ್ದರು.
ಈ ನಡುವೆ, ರಾಮಮಂದಿರ ಟ್ರಸ್ಟ್ ರಚನೆಯ ಪ್ರಕಟಣೆಗೆ ಅನುಮತಿಯ ಅಗತ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಯುಎನ್ಐ ಎಸ್ಎಚ್ 1751
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..