Monday, Sep 21 2020 | Time 12:33 Hrs(IST)
 • ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ; ಹಾರಂಗಿ ಜಲಾಶಯದ ನೀರಿನ ಮಟ್ಟ ಏರಿಕೆ
 • ಕೊರೊನಾ ಆತಂಕದ ಮಧ್ಯೆ ವಿಧಾನಮಂಡಲ ಅಧಿವೇಶನ4 ಆರಂಭ: ಇತ್ತೀಚೆಗೆ ಮೃತರಾದ ಗಣ್ಯರಿಗೆ ಸಂತಾಪ
 • ಎತ್ತಿನ ಬಂಡಿ ಸಮೇತ ಇಬ್ಬರು ಯುವಕರು ನದಿ ಪಾಲು: ಮುಂದುವರೆದ ಶೋಧ ಕಾರ್ಯ
 • ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಯಡಿಯೂರಪ್ಪ
 • ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
 • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
 • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
 • ಕೊವಿಡ್‍-19: ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ 1,36,895 ಕ್ಕೆ ಏರಿಕೆ
 • ಬ್ರೆಜಿಲ್‌ನಲ್ಲಿ ಹೆದ್ದಾರಿ ಅಪಘಾತ: 12 ಮಂದಿ ಸಾವು
 • ಪ್ರೇಮಸೌಧ, ತಾಜ್ ಮಹಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ
 • ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ
 • ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು
Special Share

ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !

ನವದೆಹಲಿ, ಆಗಸ್ಟ್ ೩(ಯುಎನ್‌ಐ) ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ನೆಡೆಯಲಿರುವ ಭೂಮಿ ಪೂಜೆಯ ಸಂದರ್ಭದಲ್ಲಿ ಹಿಂದೂ ಹಾಗೂ ಮುಸ್ಲಿಮರ ನಡುವೆ ಸಹೋದರ ಭಾವನೆ ಮೂಡಿಸುವ ಅಪರೂಪದ ಘಟನೆ ನಡೆದಿದೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಬಾಬರಿ ಮಸೀದಿಗಾಗಿ ನ್ಯಾಯಾಲಯದಲ್ಲಿ ಹೋರಾಟ ನಡೆಸಿದ್ದ ಇಕ್ಬಾಲ್ ಅನ್ಸಾರಿ ಇಂದು ಮೊದಲ ಆಹ್ವಾನ ಪತ್ರಿಕೆ ನೀಡಲಾಯಿತು.
ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದದಲ್ಲಿ ಮುಸ್ಲಿಮರ ಪರವಾಗಿ ಬಲವಾದ ದ್ವನಿ ಎತ್ತಿದವರಲ್ಲಿ ಅನ್ಸಾರಿ ಕೂಡ ಒಬ್ಬರು. ಆದರೆ ಭೂಮಿ ಪೂಜೆಗೆ ತಮಗೆ ಆಹ್ವಾನ ನೀಡಿರುವುದಕ್ಕೆ ಅನ್ಸಾರಿ ಹರ್ಷ ವ್ಯಕ್ತಪಡಿಸಿದ್ದಾರೆ. ನನಗೆ ಮೊದಲ ಆಹ್ವಾನ ನೀಡಿರುವುದು ಸಾಕ್ಷಾತ್ ಶ್ರೀರಾಮನ ಕೃಪೆ ಎಂದು ತಾವು ಭಾವಿಸುವುದಾಗಿ, ಆಹ್ವಾನವನ್ನು ಪೂರ್ಣ ಹೃದಯದಿಂದ ಸ್ವೀಕರಿಸಿದ್ದೇನೆ ಎಂದು ಅನ್ಸಾರಿ ಹೇಳಿದ್ದಾರೆ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮೇ ೫ ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭ ನೆಡೆಯಲಿದೆ. ದೇಶಾದ್ಯಂತ ಕಾತುರದಿಂದ ಎದುರು ನೋಡುತ್ತಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
ಕೇಸರಿ ಬಣ್ಣದ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರ ಹೆಸರುಗಳಿವೆ. ಕೊರೊನಾ ಸಾಂಕ್ರಾಮಿಕ ದಿಂದಾಗಿ ಕೇವಲ ೧೮೦ ಮಂದಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಅತಿಥಿ ಪಟ್ಟಿಯಲ್ಲಿ ಮೊದಲು ೨೦೦ ಮಂದಿಯ ಹೆಸರುಗಳಿದ್ದವು. ಆದರೆ, ಅದನ್ನು ಮತ್ತೆ ೧೭೦ ರಿಂದ ೧೮೦ಕ್ಕೆ ಇಳಿಸಲಾಗಿದೆ.
ಯುಎನ್‌ಐ ಕೆವಿಆರ್ ೨೦೩೭
More News

ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ

21 Sep 2020 | 8:48 AM

 Sharesee more..

ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು

21 Sep 2020 | 8:00 AM

 Sharesee more..
ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆ, ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆ ಮುಂದುವರಿಯಲಿದೆ: ಪ್ರಧಾನಿ ಮೋದಿ ರೈತರಿಗೆ ಭರವಸೆ

ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆ, ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆ ಮುಂದುವರಿಯಲಿದೆ: ಪ್ರಧಾನಿ ಮೋದಿ ರೈತರಿಗೆ ಭರವಸೆ

20 Sep 2020 | 8:02 PM

ನವದೆಹಲಿ, ಸೆ 20(ಯುಎನ್ಐ) ಕೃಷಿ ವಲಯದ ಸುಧಾರಣೆಗಳಿಗೆ ಸಂಬಂಧಿಸಿದ ಎರಡು ಮಹತ್ವದ ವಿಧೇಯಕಗಳು ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ರೈತರನ್ನು ಅಭಿನಂದಿಸಿದ್ದಾರೆ.

 Sharesee more..