Sunday, Aug 9 2020 | Time 14:15 Hrs(IST)
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
 • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
 • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
National Share

ಅಂಫಾನ್ ಚಂಡಮಾರುತ: ಒಡಿಶಾದಲ್ಲಿ 44.44 ಲಕ್ಷ ಜನರು ಬಾಧಿತ: ಒಂದು ಲಕ್ಷ ಹೆಕ್ಟೇರ್‌ ಬೆಳೆ ನಾಶ

ಭುವನೇಶ್ವರ, ಮೇ 23 (ಯುಎನ್‌ಐ) ಕಳೆದ ಬುಧವಾರ ಒಡಿಶಾಗೆ ಅಪ್ಪಳಿಸಿದ ಅಂಫಾನ್‍ ಚಂಡಮಾರುತದಿಂದ ಹತ್ತು ಜಿಲ್ಲೆಗಳಲ್ಲಿ 44 ಲಕ್ಷ 44 ಸಾವಿರದ 896 ಜನರು ಬಾಧಿತರಾಗಿದ್ದಾರೆ.

ಚಂಡಮಾರುತದಿಂದಾಗಿ ರಾಜ್ಯದಲ್ಲಿ ಮಾನವ ಸಾವು ಬಗ್ಗೆ ದೃಢಪಟ್ಟಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.
ಪ್ರಾಥಮಿಕ ಅಂದಾಜಿನಂತೆ, ಬಾಲಸೋರ್, ಭದ್ರಕ್, ಕೇಂದ್ರಪಾಡ, ಜಗತ್‍ಸಿಂಗ್‌ಪುರ, ಮಯೂರ್‍ ಬಂಜ್‍, ಕಟಕ್,ಜಾಜ್‍ಪುರ, ಖೋರ್ಧಾ ಮತ್ತು ಪುರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಚಂಡಮಾರುತ ಪರಿಣಾಮ ಬೀರಿದೆ.

ಸುಮಾರು 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬೆಳೆ ಹಾನಿಯಾಗಿದೆ. ಚಂಡಮಾರುತದಿಂದ ಹಾನಿಗೊಳಗಾದ ಬೆಳೆ ನಷ್ಟದ ಅಂದಾಜು ಮಾಡಲಾಗುತ್ತಿದ್ದ, ಮೇ 26 ರೊಳಗೆ ಈ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ.ಆದರೆ ಬಾಲಸೋರ್, ಭದ್ರಕ್, ಕೇಂದ್ರಪಾಡ ಮತ್ತು ಜಗತ್‍ಸಿಂಗ್‍ಪುರ ಜಿಲ್ಲೆಗಳಲ್ಲಿ ವ್ಯಾಪಕ ಹಾನಿಯಾಗಿದೆ.

ಒಟ್ಟಾರೆ, 9833 ಗ್ರಾಮಗಳು, 92 ಬ್ಲಾಕ್‌ಗಳಲ್ಲಿನ 1558 ಗ್ರಾಮ ಪಂಚಾಯಿತಿಗಳು ಮತ್ತು 22 ನಗರ ಸ್ಥಳೀಯ ಸಂಸ್ಥೆಗಳಲ್ಲಿ 272 ವಾರ್ಡ್‌ಗಳಲ್ಲಿ ಚಂಡಮಾರುತ ಪರಿಣಾಮ ಬೀರಿದೆ.ಚಂಡಮಾರುತದಿಂದ ಸುಮಾರು 500 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, 15,000 ಮನೆಗಳು ಭಾಗಶಃ ಹಾನಿಗೊಂಡಿವೆ. 28 ದೊಡ್ಡ ಪ್ರಾಣಿಗಳು, 9 ಸಣ್ಣ ಪ್ರಾಣಿಗಳು ಮತ್ತು 3680 ಕೋಳಿಗಳು ನಾಶವಾಗಿವೆ.
ಸುಮಾರು 2,00,346 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸಂತ್ರಸ್ತರಿಗೆ ತಕ್ಷಣದ ವೈದ್ಯಕೀಯ ನೆರವು ನೀಡಲು ಸಂಚಾರಿ ವೈದ್ಯಕೀಯ ತಂಡಗಳನ್ನು ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.

ಚಂಡಮಾರುತದಿಂದ ವಿದ್ಯುತ್‍ ಜಾಲವೂ ವ್ಯಾಪಕ ಹಾನಿಗೊಂಡಿದ್ದು, ಪುನರ್‍ ಸ್ಥಾಪನೆ ಕಾರ್ಯಗಳು ಭರದಿಂದ ಸಾಗುತ್ತಿವೆ.

ಯುಎನ್‍ಐ ಎಸ್‍ಎಲ್‍ಎಸ್ 1948