Saturday, Mar 28 2020 | Time 22:20 Hrs(IST)
 • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
 • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
 • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
 • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
 • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
 • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
 • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
 • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
 • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
 • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
 • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
 • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
 • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
 • ಕೋವಿಡ್ 19 : ಟಿಟಿಡಿಯಿಂದ 15 ಸಾವಿರ ಆಹಾರ ಪೊಟ್ಟಣ ವಿತರಣೆ
 • ಚೀನಾ – ಯೂರೋಪ್ ಸರಕು ಸಾಗಣೆ ರೈಲು ಸೇವೆ ಪುನರಾರಂಭ
National Share

ಆಗಸ್ಟ್ ನಿಂದ ಬಂಧನದಲ್ಲಿರುವ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಸಿಗದ ಮುಕ್ತಿ ಭಾಗ್ಯ

ಶ್ರೀನಗರ, ಜ 6 (ಯುಎನ್‌ಐ) ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಆಗಸ್ಟ್‌ನಿಂದ ಬಂಧನಕ್ಕೊಳಗಾಗೊದ್ದ ಮಾಜಿ ಸಚಿವರು ಮತ್ತು ಶಾಸಕರು ಸೇರಿದಂತೆ 25 ಕ್ಕೂ ಹೆಚ್ಚು ನಾಯಕರನ್ನು ಸರ್ಕಾರ ಬಿಡುಗಡೆ ಮಾಡಿದರೂ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಈ ಮಧ್ಯೆ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಭ್ಯರ್ಥಿಯಾಗಿ ಬಾರಾಮುಲ್ಲಾ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಮಾಜಿ ಕಾರ್ಮಿಕ ನಾಯಕ ಅಬ್ದುಲ್ ಖಯೂಮ್ ವಾನಿ ಅವರನ್ನು ಆರು ತಿಂಗಳ ನಂತರ ಬುಧವಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಬಿಜೆಪಿ ಕೋಟಾದಿಂದ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಪೀಪಲ್ಸ್ ಕಾನ್ಫರೆನ್ಸ್ (ಪಿಸಿ) ಅಧ್ಯಕ್ಷ ಸಜ್ಜದ್ ಗಣಿ ಲೋನ್ ಅವರನ್ನು ಉಪ-ಜೈಲಿನಿಂದ ಬಿಡುಗಡೆ ಮಾಡಲಾಗಿದ್ದು, ಬುಧವಾರ ಗೃಹಬಂಧನದಲ್ಲಿರಿಸಲಾಗಿದೆ.

ಹಾಗೆಯೇ,ರಾಜಕೀಯಕ್ಕೆ ಧುಮಿಕಿರುವ ಮಾಜಿ ಐಎಎಸ್ ಅಧಿಕಾರಿ ಡಾ. ಷಾ ಫಸಲ್ ಅವರನ್ನು ಉಪ ಜೈಲಾಗಿ ಪರಿವರ್ತನೆಗೊಂಡಿದ್ದ ಎಂಎಲ್ಎ ಹಾಸ್ಟೆಲ್ ನಿಂದ ಬಿಡುಗಡೆ ಮಾಡಲಾಗಿದ್ದು, ಬಳಿಕ ಗೃಹಬಂಧನದಲ್ಲಿರಿಸಲಾಗಿದೆ.
ಆಗಸ್ಟ್ 5 ರಂದು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಮೂವರು ಮಾಜಿ ಮುಖ್ಯಮಂತ್ರಿಗಳಾದ ಡಾ. ಫಾರೂಕ್ ಅಬ್ದುಲ್ಲಾ, ಅವರ ಪುತ್ರ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 170 ರ ಅಡಿ ಬಂಧನದಲ್ಲಿಡಲಾಗಿದೆ.

ಶ್ರೀನಗರ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಡಾ.ಅಬ್ದುಲ್ಲಾ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿ ಪ್ರಕರಣ ದಾಖಲಿಸಿ ಮೂರು ತಿಂಗಳ ಬಂಧನದಲ್ಲಿಡಲಾಗಿತ್ತು. ನಂತರ ಬಂಧನ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿತ್ತು.

ಯುಎನ್ಐ ಎಸ್ಎಲ್ಎಸ್ 133
More News
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..

ಕೋವಿಡ್‌ 19: ಸೋಂಕಿತರ ಸಂಖ್ಯೆ 873ಕ್ಕೇರಿಕೆ

28 Mar 2020 | 1:06 PM

 Sharesee more..