Sunday, Aug 9 2020 | Time 14:14 Hrs(IST)
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
 • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
 • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
National Share

ಆರ್ ಬಿಐ ಸರ್ಕಾರಕ್ಕೆ ಆರ್ಥಿಕ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಬೇಕು; ಚಿದಂಬರಂ

ನವದೆಹಲಿ, ಮೇ 23 (ಯುಎನ್ಐ) ಈ ವರ್ಷ ಜಿಡಿಪಿ ಪ್ರಮಾಣ ಕುಸಿಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಆರ್ಥಿಕತೆ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಆರ್ ಬಿಐ ಸರ್ಕಾರಕ್ಕೆಸೂಚನೆ ನೀಡಬೇಕು ಎಂದಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಆರ್ ಬಿಐ ಹೇಳಿಕೆ ನಂತರವೂ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 20 ಲಕ್ಷ ಕೋಟಿ ರೂ. ಪರಿಹಾರ ಪ್ಯಾಕೇಜ್ ಅನ್ನೇ ಸಾಧನೆಯೆಂಬಂತೆ ಬಿಂಬಿಸುತ್ತಿದ್ದಾರೆ. ಆದರೆ, ಅದು ಜಿಡಿಪಿಯ ಶೇ.1ಕ್ಕಿಂತ ಕಡಿಮೆ ಮೊತ್ತವಾಗಿದೆ ಎಂದು ಟೀಕಿಸಿದ್ದಾರೆ.
ಸರ್ಕಾರ ಆರ್ಥಿಕತೆಯನ್ನು ನಕಾರಾತ್ಮಮಕ ಪ್ರಗತಿಯತ್ತ ಸಾಗಿಸುತ್ತಿರುವುದಕ್ಕೆ ಆರ್ ಎಸ್ ಎಸ್ ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.
ರಾಜ್ಯಪಾಲ ಶಕ್ತಿಕಾಂತ್ ದಾಸ್ ಅವರು, ಬೇಡಿಕೆ ಕುಸಿದಿದ್ದು, 2020-21ರ ಪ್ರಗತಿ ನಕಾರಾತ್ಮಕ ದಿಕ್ಕಿನತ್ತ ಸಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೂ, ಅವರು ಹೆಚ್ಚು ದ್ರವೀಕರಣಕ್ಕೆ ಆದ್ಯತೆ ನೀಡುತ್ತಿರುವುದೇಕೆ? ಸರ್ಕಾರಕ್ಕೆ 'ನಿಮ್ಮ ಕೆಲಸ ಮಾಡಿ. ಆರ್ಥಿಕ ಕ್ರಮಗಳನ್ನು ಕೈಗೊಳ್ಳಿ' ಎಂದು ಹೇಳಬಾರದೇಕೆ ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.
ಶುಕ್ರವಾರ ಆರ್ ಬಿಐ, ಈ ವರ್ಷ ಜಿಡಿಪಿ ಕಡಿಮೆಯಾಗಬಹುದು ಮತ್ತು ಮುಂದಿನ ವರ್ಷ ನಕಾರಾತ್ಮಕ ದಿಕ್ಕಿನಲ್ಲಿ ಸಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿತ್ತು.
ಯುಎನ್ಐ ಎಸ್ಎಚ್ 1604