Sunday, Mar 29 2020 | Time 00:31 Hrs(IST)
National Share

ಆಸ್ಟ್ರೇಲಿಯಾ ಪ್ರಧಾನಿಗೆ ದೂರವಾಣಿ ಕರೆ ಮಾಡಿದ ಮೋದಿ

ನವದೆಹಲಿ, ಜ 3 (ಯುಎನ್ಐ) ಸುದೀರ್ಘ ಕಾಡ್ಗಿಚ್ಚಿನ ಹಿನ್ನೆಲೆಯಲ್ಲಿ ಭಾರತ ಪ್ರವಾಸ ರದ್ದುಗೊಳಿಸಿರುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮರಿಸನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ಕುರಿತು ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದ್ದು, ಆಸ್ಟ್ರೇಲಿಯದಲ್ಲಿ ಕಾಡ್ಗಿಚ್ಚಿನಿಂದ ಉಂಟಾಗಿರುವ ಸಾವು, ನೋವುಗಳಿಗೆ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ ಎಂದಿದೆ.
ಈ ವರ್ಷದಲ್ಲಿ ಮೊರಿಸನ್ ಅವರ ಭಾರತದ ಭೇಟಿಗೆ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ ಎಂದರು.
ಮೊರಿಸನ್ ಅವರು ಜ.14ರಂದು ದೆಹಲಿಗೆ ಆಗಮಿಸಿ ಮೂರು ದಿನಗಳ ರೈಸೀನಾ ಹಿಲ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.
ದೂರವಾಣಿ ಕರೆ ಮಾಡಿದ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಎಲ್ಲಾ ರೀತಿಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ಜೊತೆಗೆ, ದ್ವಿಪಕ್ಷೀಯ ಒಪ್ಪಂದಗಳ ಕುರಿತು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಯುಎನ್ಐ ಎಸ್ಎಚ್ 2011
"A planned trip to Japan, which Mr Morrison was due to visit on his way back to Australia, is also in doubt," The Sydney Morning Herald reported.
UNI DEVN 1905
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..