Wednesday, Feb 26 2020 | Time 09:59 Hrs(IST)
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಇರಾಕ್ ಗೆ ಅತ್ಯವಶ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ

ನವದೆಹಲಿ, ಜ 8 (ಯುಎನ್ಐ) ಇರಾಕ್ ದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ತೀರಾ ಅಗತ್ಯವಲ್ಲದ ಪ್ರವಾಸಗಳನ್ನು ಕೈಗೊಳ್ಳದಂತೆ ಕೇಂದ್ರ ವಿದೇಶಾಂಗ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ.
"ಇರಾಕ್ ನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು, ಮುಂದಿನ ಅಧಿಸೂಚನೆ ಹೊರಬೀಳುವವರೆಗೆ ಆ ದೇಶಕ್ಕೆ ಅತ್ಯವಶ್ಯವಲ್ಲದ ಪ್ರಯಾಣ ಕೈಗೊಳ್ಳಬಾರದು. ಇರಾಕ್ ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದಿರಬೇಕು ಮತ್ತು ದೇಶದೊಳಗೆ ಪ್ರಯಾಣ ಮಾಡುವುದನ್ನು ತಡೆಹಿಡಿಯಬೇಕು" ಎಂದು ಸಚಿವಾಲಯ ಸಲಹೆ ನೀಡಿದೆ.
ಬಾಗ್ದಾದ್ ನಲ್ಲಿರುವ ನಮ್ಮ ರಾಯಭಾರಿ ಮತ್ತು ಎರ್ಬಿಲ್ ನ ನಮ್ಮ ದೂತವಾಸ ಕಚೇರಿ ಎಂದಿನಂತೆ ಕೆಲಸ ನಿರ್ವಹಿಸಲಿದ್ದು, ಭಾರತೀಯರಿಗೆ ಅಗತ್ಯ ನೆರವು ಒದಗಿಸಲಿದೆ ಎಂದು ಹೇಳಿಕೆ ತಿಳಿಸಿದೆ.
ಈ ನಡುವೆ, ಇರಾಕ್ ನ ಸೇನಾ ಕಮಾಂಡರ್ ಮೇಜರ್ ಜನರಲ್ ಕಾಸೇಮ್ ಸೊಲೈಮನಿ ಅವರ ಹತ್ಯೆಗೆ ಪ್ರತಿಕಾರವಾಗಿ ಸೇನಾ ಪಡೆ, ಅಮೆರಿಕದ ಭದ್ರತಾ ಪಡೆಗಳಿರುವ ಎರಡು ಇರಾಕಿ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಠ 80 ಅಮೆರಿಕ ಯೋಧರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಯುಎನ್ಐ ಎಸ್ಎಚ್ 1257