Wednesday, Feb 26 2020 | Time 10:30 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮಾತುಕತೆ; ಉದ್ವಿಗ್ನತೆಗೆ ಭಾರತ ಕಳವಳ

ನವದೆಹಲಿ, ಜ.5 (ಯುಎನ್‌ಐ) ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಭಾನುವಾರ ಇರಾನಿನ ತಮ್ಮ ಸಹೋದ್ಯೋಗಿ ಜವಾದ್ ಜರೀಫ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಇರಾಕ್‌ನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಇರಾನ್‌ನ ವಿದೇಶಾಂಗ ಸಚಿವ ಜವಾದ್ ಜರೀಫ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಬೆಳವಣಿಗೆಗಳು ಬಹಳ ಗಂಭೀರವಾದ ತಿರುವು ಪಡೆದಿವೆ. ಈ ತೀವ್ರ ಉದ್ವಿಗ್ನತೆಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸುತ್ತಿದೆ ಎಂದು ಡಾ.ಜೈಶಂಕರ್ ಟ್ವೀಟ್ ಮಾಡಿದ್ದಾರೆ.
ಪರಸ್ಪರ ಸಂಪರ್ಕದಲ್ಲಿರಲು ನಾವು ಒಪ್ಪಿಕೊಂಡಿದ್ದೇವೆ ಎಂದು ಅವರು ಬರೆದಿದ್ದಾರೆ.
ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನಿನ ಕಮಾಂಡರ್ ಮೇಜರ್ ಜನರಲ್ ಖಾಸಿಮ್‌ ಸುಲೈಮಾನಿ ಹತ್ಯೆಯ ನಂತರ, ಯುಎಸ್-ಇರಾನ್ ಸಂಬಂಧದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ 'ಸಂಯಮ' ಪಾಲಿಸುವಂತೆ ಭಾರತ ಕರೆ ನೀಡಿತ್ತು.
ಇರಾನಿನ ಹಿರಿಯ ನಾಯಕನನ್ನು ಅಮೆರಿಕ ಹತ್ಯೆ ಮಾಡಿದೆ ಎಂಬುದನ್ನು ನಾವು ಗಮನಿಸಿದ್ದೇವೆ. ಉದ್ವಿಗ್ನತೆಯ ಹೆಚ್ಚಳವು ಜಗತ್ತಿಗೆ ಎಚ್ಚರಿಕೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಈ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಸುರಕ್ಷತೆಯು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ. ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳದಿರುವುದು ಅತ್ಯಗತ್ಯ ಎಂದು ಭಾರತ ಹೇಳಿಕೆಯಲ್ಲಿ ತಿಳಿಸಿದೆ.
"ಭಾರತ ನಿರಂತರವಾಗಿ ಸಂಯಮವನ್ನು ಪ್ರತಿಪಾದಿಸುತ್ತಿದೆ ಮತ್ತು ಅದನ್ನು ಮುಂದುವರಿಸಿದೆ" ಎಂದು ಹೇಳಿಕೆ ತಿಳಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದೆ. ಇದೇ ವೇಳೆ ಇರಾನ್‌ ಕೂಡ ಸುಲೈಮಾನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಘೋಷಿಸಿದೆ.
"ಅವರು (ಇರಾನ್) ನಮ್ಮ ಮೇಲೆ ದಾಳಿ ನಡೆಸಿದರು, ಮತ್ತು ನಾವು ಮತ್ತೆ ದಾಳಿ ನಡೆಸಿದೆವು. ಅವರು ಮತ್ತೆ ದಾಳಿ ಮಾಡಿದರೆ, ಅದನ್ನು ಮಾಡಬಾರದೆಂದು ನಾನು ಬಲವಾಗಿ ಸಲಹೆ ನೀಡುತ್ತೇನೆ, ಒಂದು ವೇಳೆ ದಾಳಿ ನಡೆದರೆ ಹಿಂದಿನ ದಾಳಿಗಿಂತಲೂ ಪ್ರಬಲವಾದ ದಾಳಿ ನಡೆಸುತ್ತೇವೆ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಅಮೆರಿಕದ ದಾಳಿ ಅತ್ಯಂತ ಕಠಿಣ ಹಾಗೂ ವೇಗದ್ದಾಗಿರುತ್ತದೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ.
ಯುಎನ್ಐ ಎಎಚ್ 2054