Wednesday, Feb 26 2020 | Time 10:41 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಇರಾನ್ ಸಚಿವರೊಂದಿಗೆ ಜೈಶಂಕರ್ ಮಾತುಕತೆ

ಇರಾನ್ ಸಚಿವರೊಂದಿಗೆ ಜೈಶಂಕರ್ ಮಾತುಕತೆ
ಇರಾನ್ ಸಚಿವರೊಂದಿಗೆ ಜೈಶಂಕರ್ ಮಾತುಕತೆ

ನವದೆಹಲಿ ಜ 5(ಯುಎನ್ಐ) ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಇರಾನಿನ ವಿದೇಶಾಂಗ ಸಚಿವ ಜಾವದ್ ಜರೀಫ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಅಲ್ಲಿನ ಪರಿಸ್ಥಿತಿಯ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜೈಶಂಕರ್, ಈಗಷ್ಟೇ ಜರೀಫ್ ಅವರೊಂದಿಗೆ ಮಾತುಕತೆ ನಡೆಸಿದೆ. ದೇಶದ ಘಟನೆಗಳು ಆತಂಕಕಾರಿ ತಿರುವು ಪಡೆದುಕೊಂಡಿದೆ ಎಂದು ಭಾರತದ ಆತಂಕ ವ್ಯಕ್ತಪಡಿಸಿದೆ ಎಂದಿದ್ದಾರೆ.

ಈ ಸಂಬಂಧ ಮುಂದಿನ ದಿನಗಳಲ್ಲಿ ಇರನ್ ನೊಂದಿಗೆ ಸಂಪರ್ಕದಲ್ಲಿರುವುದಾಗಿ ಭರವಸೆ ನೀಡಿರುವುದಾಗಿ ಭರವಸೆ ನೀಡಿದ್ದಾರೆ.

ಇರಾನ್ ಮೇಲೆ ಅಮೆರಿಕ ನಡೆಸಿದ ವಾಯುದಾಳಿಯಲ್ಲಿ ಅಲ್ಲಿನ ಕಮಾಂಡರ್ ಮೇಜರ್ ಖಾಸಿಮ್ ಸೊಲೈಮನಿ ಹತ್ಯೆಗೀಡಾದ ಘಟನೆ ಕುರಿತು ಪ್ರತಿಕ್ರಿಯಿಸಿದ ಜೈಶಂಕರ್ ಅಮೆರಿಕ ಹಾಗೂ ಇರನ್ ನಡುವಿನ ಕಲಹದ ಕುರಿತು ಉಭಯ ರಾಷ್ಟ್ರಗಳು ತಾಳ್ಮೆಯಿಂದ ವರ್ತಿಸಬೇಕು ಎಂದು ಕರೆ ನೀಡಿದ್ದಾರೆ.

ಈ ಪ್ರದೇಶದಲ್ಲಿ ಶಾಂತಿ, ಸುಸ್ಥಿರತೆ ಮತ್ತು ಭದ್ರತೆ ಕಾಪಾಡುವುದು ಭಾರತದ ಪ್ರಥಮ ಆದ್ಯತೆಯಾಗಿದೆ. ಈ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಬಾರದು ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ.

ಅಮೆರಿಕದ ಮೇಲೆ ಪ್ರತಿದಾಳಿ ನಡೆಸುವುದಾಗಿ ಹೇಳಿಕೆ ನೀಡಿರುವ ಇರಾನ್ ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಇರಾನ್ ನಮ್ಮ ಮೇಲೆ ದಾಳಿ ನಡೆಸಿದ್ದಕ್ಕೆ ತಿರುಗೇಟು ನೀಡಿದ್ದೇವೆ. ಈ ಮತ್ತೊಮ್ಮೆ ದಾಳಿ ನಡೆಸದಂತೆ ಎಚ್ಚರಿಕೆ ನೀಡಿದ್ದೇವೆ. ಹಾಗೇನಾದರೂ ಆದಲ್ಲಿ ನಾವು ಮತ್ತೆ ಪ್ರಬಲ ಉತ್ತರ ನೀಡಲಿದ್ದೇವೆ ಎಂದಿದ್ದಾರೆ.

ಯುಎನ್ಐ ಎಸ್ಎಚ್ 1942