Wednesday, Feb 26 2020 | Time 10:47 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಇಂದು ವಿಶ್ವ ಬ್ರೈಲ್ ದಿನ: ಲೂಯಿಸ್ ಬ್ರೈಲ್ ಸ್ಮರಣೆ

ನವದೆಹಲಿ, ಜ 4 [ಯುಎನ್ಐ] ಇಂದು ವಿಶ್ವ ಬ್ರೈಲ್ ದಿನ. ಬ್ರೈಲ್ ದಿನವನ್ನು ೨೦೧೯ರಿಂದ ಅಧಿಕೃತವಾಗಿ ಆಚರಿಸಲಾಗುತ್ತಿದೆ.
ಸಂಪರ್ಕ ವಲಯದಲ್ಲಿ ಬ್ರೈಲ್ ಲಿಪಿಯ ಮಹತ್ವ ಸಾರುವ ಉದ್ದೇಶದಿಂದ ಈ ದಿನ ಮಹತ್ವ ಪಡೆದುಕೊಂಡಿದ್ದು, ಜಗತ್ತಿನಾದ್ಯಂತ ಬ್ರೈಲ್ ದಿನವನ್ನು ಆಚರಿಸಲಾಗುತ್ತಿದೆ.

ದೃಷ್ಟಿ ವಿಶೇಷಚೇತನರ ಹಕ್ಕುಗಳ ರಕ್ಷಣೆ ದೃಷ್ಟಿಯಿಂದಲೂ ಈ ದಿನ ವಿಶೇಷ ಪಡೆದಿದೆ. ಜನವರಿ ೪ ಬ್ರೈಲ್ ಲಿಪಿ ಆವಿಷ್ಕಾರ ಮಾಡಿದ ಲೂಯಿಸ್ ಬ್ರೈಲ್ ಅವರ ಜನ್ಮದಿನವೂ ಆಗಿದ್ದು, ಅವರ ಹುಟ್ಟಿದ ದಿನವನ್ನು ವಿಶ್ವ ಬ್ರೈಲ್ ದಿನವಾಗಿ ಆಚರಿಸಲ್ಪಡುತ್ತಿದೆ.
ದೃಷ್ಟಿ ವಿಕಲ ಚೇತನರದಲ್ಲಿ ಬ್ರೈಲ್ ಲಿಪಿ ಹೊಸ ಆಯಾಮ ಸೃಷ್ಟಿಸಿದ್ದು, ಅವರ ಬದುಕಿಗೆ ಆಶಾಕಿರಣ ಮೂಡಿಸಿದೆ. ಈ ಸಮುದಾಯದ ಸಾಮಾಜಿಕ, ಆರ್ಥಿಕ ಬೆಳವಣಿಗೆಯಲ್ಲೂ ಗಮಹಾರ್ಹ ಪಾತ್ರ ನಿರ್ವಹಣೆ ಮಾಡಿದೆ. ದೃಷ್ಟಿ ವಿಕಲ ಚೇತನರು ಸ್ವಾವಲಂಬಿ ಬದುಕು ಸಾಗಿಸಲು ಬ್ರೈಲ್ ಲಿಪಿ ನಿರ್ಣಾಯಕ ಪಾತ್ರ ವಹಿಸಿದೆ.
ಯುಎನ್ಐ ವಿಎನ್ 1006