Wednesday, Feb 26 2020 | Time 10:34 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಉತ್ತರ ಪ್ರದೇಶದಲ್ಲಿ ದೋಣಿ ದುರಂತ: 11 ಮಂದಿ ಸಾವು ಶಂಕೆ

ಗೋಂಡಾ, ಜ 21 (ಯುಎನ್‍ಐ)- ಉತ್ತರ ಪ್ರದೇಶದಲ್ಲಿನ ಈ ಜಿಲ್ಲೆಯ ತರಾಬ್ ಗಂಜ್ ತೆಹಸಿಲ್ ನ ಉಮ್ರಿಬೇಗಮ್ ಗಂಜ್ ಸಮೀಪ ಘಗ್ರಾ ನದಿಯನ್ನು ದಾಟುತ್ತಿದ್ದ ದೋಣಿಯೊಂದು ಸೇತುವೆಗೆ ಡಿಕ್ಕಿ ಹೊಡೆದು ಕನಿಷ್ಟ 11 ಮಂದಿ ಮುಳುಗಿ ಸತ್ತಿರುವುದಾಗಿ ಶಂಕಿಸಲಾಗಿದೆ.
ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ 14 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. 14 ಜನರ ಪೈಕಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇವರಲ್ಲಿ ಒಬ್ಬ ವ್ಯಕ್ತಿ ಮೃತಪಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಜು ತಜ್ಞರು ಇತರರಿಗಾಗಿ ಶೋಧ ನಡೆಸುತ್ತಿದ್ದಾರೆ.
ಎಲಿ ಪರಸೌಲಿ ಗ್ರಾಮದ ಜನರು ತಮ್ಮ ಹೊಲಗಳಿಗೆ ಹೋಗಲು ದೋಣಿಯಲ್ಲಿ ಘಗ್ರಾ ನದಿ ದಾಟುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ, ದೋಣಿ ಒಮ್ಮೆಲೇ ನಿಯಂತ್ರಣ ಕಳೆದುಕೊಂಡು ಸೇತುವೆಗೆ ಡಿಕ್ಕಿ ಹೊಡೆದು ನದಿಯಲ್ಲಿ ಮಳುಗಿದೆ. ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ರೈತರು ನದಿಯಲ್ಲಿ ಮುಳುಗಿದ್ದಾರೆ. ಸ್ಥಳೀಯ ಜನರು ಮತ್ತು ಪೊಲೀಸರು 25 ಜನರ ಪೈಕಿ 14 ಜನರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1455