Wednesday, Feb 26 2020 | Time 10:46 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಉತ್ತರ ಪ್ರದೇಶದಲ್ಲಿ ವ್ಯಾಪಕ ಭದ್ರತೆ : ಅನೇಕ ಜಿಲ್ಲೆಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತ

ಲಖನೌ, ಡಿ 27(ಯುಎನ್‍ಐ)_ ಉತ್ತರಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಶುಕ್ರವಾರದ ಪ್ರಾರ್ಥನೆಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಶಾಂತಿ ಸಮಿತಿಗಳ ಸಭೆಗಳನ್ನು ನಡೆಸುವುದರೊಂದಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಅಭಿಯಾನವನ್ನು ನಡೆಸುತ್ತಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಕಳೆದ ರಾತ್ರಿಯಿಂದ ಅಲಿಗಢ, ಆಗ್ರಾ, ಮಥುರಾ ಮತ್ತು ಬುಲಂದ್‌ಶಹರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಂತರ್ಜಾಲ (ಇಂಟರ್‍ ನೆಟ್‍) ಸೇವೆಗಳನ್ನು ನಿರ್ಬಂಧಿಸಲಾಗಿದೆ. ಈ ಮಧ್ಯೆ, ಇತ್ತೀಚಿನ ಪ್ರತಿಭಟನೆಗಳಲ್ಲಿ ಸಾರ್ವಜನಿಕ ಆಸ್ತಿಗೆ ಆದ ಹಾನಿಗೆ ನಷ್ಟವನ್ನು ತುಂಬಿಕೊಡುವ ನಿಟ್ಟಿನಲ್ಲಿ 498 ಗಲಭೆಕೋರರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವರಿಗೆ ರಾಜ್ಯ ಪೊಲೀಸರು ನೋಟಿಸ್ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಗಲಭೆಗಳು ನಡೆದು ಹಲವರು ಮೃತಪಟ್ಟಿದ್ದರು. ಗಲಭೆಗಳ ವೇಳೆ ಸರ್ಕಾರಿ ಬಸ್‍ಗಳು ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ತೀವ್ರ ಹಾನಿಯನ್ನುಂಟುಮಾಡಲಾಗಿತ್ತು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಗಲಭೆಕೋರರು ನಷ್ಟ ಭರಿಸುವ ಕ್ರಮವನ್ನು ತೆಗೆದುಕೊಂಡಿದೆ.

ಯುಎನ್‍ಐ ಎಸ್‍ಎಲ್‍ಎಸ್ 0930