Saturday, Mar 28 2020 | Time 23:01 Hrs(IST)
 • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
 • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
 • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
 • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
 • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
 • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
 • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
 • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
 • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
 • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
 • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
 • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
 • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
 • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
 • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
Special Share

ಎನ್. ಆರ್. ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ಬ್ರಿಟನ್ ಹಣಕಾಸು ಸಚಿವ

ಲಂಡನ್, ಫೆ ೧೩( ಯುಎನ್‌ಐ) ಬ್ರಿಟನ್ ದೇಶದ ಹಣಕಾಸು ಸಚಿವರಾಗಿ ಇನ್ಫೋಸಿಸ್ ಸಂಸ್ಥಾಪಕ ಎನ್ .ಆರ್. ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ (೩೯) ನೇಮಕಗೊಂಡಿದ್ದಾರೆ.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ರಿಷಿ ಸುನಕ್ ಅವರನ್ನು ದೇಶದ ಹೊಸ ಹಣಕಾಸು ಸಚಿವರನ್ನಾಗಿ ಹೆಸರಿಸಿದ್ದಾರೆ. ಹಣಕಾಸು ಸಚಿವ ಸಾಜಿದ್ ಜಾವಿದ್ ಹಠಾತ್ ರಾಜೀನಾಮೆ ನಂತರ ಈ ನೇಮಕ ಕೈಗೊಳ್ಳಲಾಗಿದೆ. ತಮ್ಮ ಸಂಪುಟದಲ್ಲಿನ ಬದಲಾವಣೆಗಳನ್ನು ಪ್ರಧಾನಿ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.
ಹ್ಯಾಂಪ್ ಷೈರ್ ನಲ್ಲಿ ಜನಿಸಿದ ಸುನಕ್ ೨೦೧೫ ರಿಂದ ಯಾರ್ಕ್‌ಷೈರ್‌ನ ರಿಚ್ಮಂಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ವರ್ಷ ವರು ಖಜಾನೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮುನ್ನ, ಕಿರಿಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ೨೦೦೯ ರಲ್ಲಿ, ಇನ್ಫೋಸಿಸ್ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಅವರನ್ನು ವಿವಾಹವಾಗಿದ್ದರು. ರಿಷಿ , ಅಕ್ಷತಾ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ರಿಷಿ ಸುನಕ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ತತ್ವಶಾಸ್ತ್ರ, ರಾಜಕೀಯ ಹಾಗೂ ಅರ್ಥಶಾಸ್ತ್ರ ಅಧ್ಯಯನ ಮಾಡಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದುಕೊಂಡಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವ ವಿದ್ಯಾಲಯದಲ್ಲಿ ಅಕ್ಷತಾ ಅವರ ಪರಿಚಯವಾಗಿ, ನಂತರ ವಿವಾಹ ಮಾಡಿಕೊಂಡಿದ್ದರು. ರಾಜಕೀಯಕ್ಕೆ ಬರುವ ಮೊದಲು ರಿಷಿ ಸುನಕ್ ಹಲವಾರು ಹೂಡಿಕೆ ಬ್ಯಾಂಕುಗಳಲ್ಲಿ ಕೆಲಸ ಮಾಡುತ್ತಿದ್ದರು. ಗೋಲ್ಡ್ಮನ್ ಸ್ಯಾಚ್ಸ್ ಕಂಪನಿಯಲ್ಲಿ ವಿಶ್ಲೇಷಕರಾಗಿ ಸೇವೆ ಸಲ್ಲಿಸಿದ್ದರು.
ಯುಎನ್ಐ ಕೆವಿಆರ್ 1921
More News

ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ

28 Mar 2020 | 9:49 PM

 Sharesee more..
ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

28 Mar 2020 | 9:36 PM

ತಿರುಪತಿ, ಮಾ 28 (ಯುಎನ್ಐ) ಕೊರೋನಾ ವೈರಸ್ ಸೋಂಕನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ), ವಸತಿರಹಿತರ ನೆರವಿಗೆ 15 ಸಾವಿರ ಪುಳಿಯೋಗರೆ ಪೊಟ್ಟಣಗಳನ್ನು ವಿತರಿಸಿದೆ.

 Sharesee more..
ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ

ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ

28 Mar 2020 | 9:22 PM

ಬೆಂಗಳೂರು, ಮಾ ೨೮(ಯುಎನ್‌ಐ) ರಾಷ್ಟ್ರೀಯ ಲಾಕ್ ಡೌನ್ ಜಾರಿಗೊಳಿಸಿರುವ ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಒದಗಿಸಲು ಬಯಸುವ ಪರೋಪಕಾರಿಗಳು ಆಹಾರವನ್ನು ಸಮೀಪದ ಪೊಲೀಸ್ ಠಾಣೆಗಳಿಗೆ ತಲುಪಿಸಿದರೆ, ಅಗತ್ಯವಿರುವ ಜನರಿಗೆ ತಲುಪಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಮನವಿ ಮಾಡಿಕೊಂಡಿದ್ದಾರೆ.

 Sharesee more..
ಕಲ್ಲಿದ್ದಲು ಸುಗಮ ಸರಬರಾಜಿಗೆ ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

ಕಲ್ಲಿದ್ದಲು ಸುಗಮ ಸರಬರಾಜಿಗೆ ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

28 Mar 2020 | 7:27 PM

ನವದೆಹಲಿ, ಮಾ 28 (ಯುಎನ್‌ಐ) ದೇಶದಲ್ಲಿ ಕಲ್ಲಿದ್ದಲು ಸರಬರಾಜನ್ನು ಅತ್ಯಗತ್ಯ ಸೇವೆ ಎಂದು ಘೋಷಿಸಲಾಗಿದ್ದು, ಲಾಕ್‌ ಡೌನ್ ಅವಧಿಯಲ್ಲಿ ನಿರ್ಣಾಯಕ ಕಲ್ಲಿದ್ದಲು ಪೂರೈಕೆಯನ್ನು ಖಾತರಿ ಪಡಿಸಲು ಅಹರ್ನಿಶಿ ಶ್ರಮಿಸುವಂತೆ ಸಚಿವಾಲಯದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಶನಿವಾರ ನಿರ್ದೇಶನ ನೀಡಿದ್ದಾರೆ.

 Sharesee more..