Saturday, Jan 25 2020 | Time 01:23 Hrs(IST)
National Share

ಎನ್ ಎಚ್ ಆರ್ ಸಿ ತಂಡದಿಂದ ದಿಶಾ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಆರೋಪಿಗಳ ಮೃತ ದೇಹಗಳ ಪರಿಶೀಲನೆ

ಹೈದರಾಬಾದ್, ಡಿ 7(ಯುಎನ್‍ಐ)- ಪಶುವೈದ್ಯೆ ದಿಶಾ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಮೃತದೇಹಗಳನ್ನು ಇರಿಸಲಾಗಿರುವ ಮೆಹಬೂಬ್ ನಗರ ಸರ್ಕಾರಿ ಆಸ್ಪತ್ರೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ ಎಚ್ ಆರ್ ಸಿ)ದ ತಂಡ ಶನಿವಾರ ಭೇಟಿ ನೀಡಿತು.

ಎನ್ ಎಚ್ ಆರ್ ಸಿ ತಂಡ ಎನ್‍ಕೌಂಟರ್ ನಡೆದ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿತು. ಎನ್‍ಕೌಂಟರ್ ನಲ್ಲಿನಾಲ್ವರು ಆರೋಪಿಗಳು ಹತ್ಯೆಯಾಗಿರುವ ಕುರಿತು ಮೇಲ್ನೋಟಕ್ಕೆ ಕಂಡು ಬಂದಿರುವ ಅಂಶಗಳನ್ನು ಪರಿಗಣಿಸಿ, ಮಾನವ ಹಕ್ಕುಗಳ ಆಯೋಗ ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದ ತಜ್ಞರ ತಂಡವನ್ನು ತನಿಖೆಗಾಗಿ ಘಟನಾ ಸ್ಥಳಕ್ಕೆ ಕಳುಹಿಸಿದೆ. ‘ಎನ್‍ಕೌಂಟರ್ ಕುರಿತು ವಿವರಣೆ ಕೋರಿ ತೆಲಂಗಾಣ ಪೊಲೀಸರಿಗೆ ಆಯೋಗ ನೋಟಿಸ್ ನೀಡಿದೆ. ಪೊಲೀಸರ ಕಸ್ಟಡಿಯಲ್ಲಿದ್ದ 26 ವರ್ಷದೊಳಗಿನ ನಾಲ್ವರು ವ್ಯಕ್ತಿಗಳನ್ನು ಎನ್‍ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂಬುದು ಗಂಭೀರ ವಿಷಯವಾಗಿದೆ.’ ಎಂದು ಆಯೋಗ ಹೇಳಿದೆ.

ಈ ಮಧ್ಯೆ, ಹಿರಿಯ ಕಾಂಗ್ರೆಸ್ ಮುಖಂಡರ ತಂಡ ತೆಲಂಗಾಣ ರಾಜ್ಯಪಾಲರನ್ನು ಶನಿವಾರ ರಾಜಭವನದಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದೆ.

ಹೈದರಾಬಾದ್, ಉನಾವೋ ಸೇರಿದಂತೆ ದೇಶದ ಅನೇಕ ಕಡೆ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ವಿರುದ್ಧ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಯುಎನ್‍ಐ ಎಸ್‍ಎಲ್‍ಎಸ್ 1524
More News
ಗಣರಾಜ್ಯ:  ನಾಳೆ ರಾಷ್ಟ್ರ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಗಣರಾಜ್ಯ: ನಾಳೆ ರಾಷ್ಟ್ರ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

24 Jan 2020 | 8:49 PM

ನವದೆಹಲಿ, ಜನವರಿ 24 (ಯುಎನ್‌ಐ) ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ 71 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಶನಿವಾರ ( ನಾಳೆ) ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

 Sharesee more..