Monday, Aug 3 2020 | Time 23:24 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Karnataka Share

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕರೋನವೈರಸ್‌ ಸೋಂಕು ದೃಢ

ಬೆಂಗಳೂರು, ಜುಲೈ 4 (ಯುಎನ್‌ಐ) ಜೂನ್ 25 ಮತ್ತು ಜುಲೈ 3 ರ ನಡುವೆ ಪರೀಕ್ಷೆ ಬರೆದ ಒಟ್ಟು 32 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕರೋನವೈರಸ್‌ ಸೋಂಕು ದೃಢಪಟ್ಟಿದೆ.
ಇತರ 80 ವಿದ್ಯಾರ್ಥಿಗಳು ಮನೆ ಸಂಪರ್ಕತಡೆಯಲ್ಲಿದ್ದಾರೆ. ಜುಲೈ 3 ರವರೆಗೆ 7.60 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, 14,745 ಮಂದಿ ಗೈರು ಹಾಜರಾಗಿದ್ದಾರೆ. ಕಂಟೈನ್‌ಮೆಂಟ್ ವಲಯಗಳಲ್ಲಿರುವ 3,911 ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಿಲ್ಲ. ಉಳಿದಂತೆ ಅನಾರೋಗ್ಯದಿಂದಾಗಿ ಒಟ್ಟು 863 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ರಾಜ್ಯಸರ್ಕಾರದ ಪ್ರಕಟಣೆ ತಿಳಿಸಿದೆ.
ಕಳೆದ ವಾರ, ಹಾಸನದ 10 ನೇ ತರಗತಿ ವಿದ್ಯಾರ್ಥಿಗೆ ಕರೋನವೈರಸ್ ಸೋಂಕು ದೃಢಪಟ್ಟಿತ್ತು. ಕರೋನವೈರಸ್ ಪರೀಕ್ಷೆ ಮಾಡಿಸಿಕೊಂಡ ನಂತರವೂ ವಿದ್ಯಾರ್ಥಿ ಜೂನ್ 25 ರಂದು ಪರೀಕ್ಷೆಯನ್ನು ಬರೆದಿದ್ದಾನೆ ಎಂದು ವರದಿಯಾಗಿದೆ. ಪರೀಕ್ಷೆ ಮುಗಿಸಿದ ಸ್ವಲ್ಪ ಸಮಯದ ನಂತರ ಮಾದರಿ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ.
ಈ ಹಿಂದೆ ಮಾರ್ಚ್ 27 ಮತ್ತು ಏಪ್ರಿಲ್ 9 ರ ನಡುವೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕೊವಿಡ್‍ -19 ಸಾಂಕ್ರಾಮಿಕ ರೋಗದಿಂದಾಗಿ ಜೂನ್ 25 ರಿಂದ ಜುಲೈ 3 ರವರೆಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು. ಪರೀಕ್ಷಾ ಹಾಲ್‍ಗಳಲ್ಲಿ ಎಲ್ಲರಿಗೂ ಸ್ಯಾನಿಟೈಸರ್ ಒದಗಿಸಲಾಗುವುದು, ಮತ್ತು ಪ್ರತಿದಿನ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಲಾಗುವುದು. ಆರೋಗ್ಯ ಇಲಾಖೆಯಿಂದ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಪ್ರತಿ ವಿದ್ಯಾರ್ಥಿಗೂ ಉಷ್ಣಾಂಶ ತಪಾಸಣೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.
ಕಂಟೈನ್‍ಮೆಂಟ್‍ ವಲಯಗಳ ವಿದ್ಯಾರ್ಥಿಗಳಿಗೆ ಮತ್ತು ರಾಜ್ಯದಲ್ಲಿ ಕೊವಿಡ್‍-19 ರೋಗಲಕ್ಷಣಗಳನ್ನು ಹೊಂದಿರುವವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯಲು ಪ್ರತ್ಯೇಕ ಕೊಠಡಿಗಳನ್ನು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿತ್ತು. ಲಾಕ್‍ಡೌನ್‍ ಹಿನ್ನೆಲೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಹತ್ತಿರದ ಕೇಂದ್ರಗಳಲ್ಲೇ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗಿತ್ತು.
ಯುಎನ್ಐ ಎಸ್ಎಲ್ಎಸ್ 1056