Sunday, Nov 1 2020 | Time 01:14 Hrs(IST)
Karnataka Share

ಎಂಟು ಪಥದ ರಸ್ತೆ ನಿರ್ಮಾಣಕ್ಕೆ ವೆಬಿನಾರ್‌ ಮೂಲಕ ಆಕ್ಷೇಪ ಸಂಗ್ರಹ; ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ನವದೆಹಲಿ, ಸೆ 20 (ಯುಎನ್ಐ) ಬೆಂಗಳೂರಿನಲ್ಲಿ ಎಂಟು ಪಥದ ಪೆರಿಫರಲ್‌ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ರಸ್ತೆ ನಿರ್ಮಾಣ ಯೋಜನೆ ಕುರಿತು ವೆಬಿನಾರ್‌ ಮೂಲಕ ಸಾರ್ವಜನಿಕ ಆಕ್ಷೇಪಣೆ ಸ್ವೀಕರಿಸಲು ಮುಂದಾಗಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಜಿಂದಾಲ್‌ ಕಾನೂನು ಶಾಲೆಯ ಪಿ.ಬಿ.ಶಶಾಂಕ್‌, ಪ್ರತೀಕ್‌ ಕುಮಾರ್‌ ಹಾಗೂ ದೆಹಲಿಯ ರಾಷ್ಟ್ರೀಯ ಕಾನೂನು ಶಾಲೆಯ ವಿದ್ಯಾರ್ಥಿನಿ ಅನುಷ್ಕಾ ಗುಪ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಸೆ.23ರಂದು ವೆಬಿನಾರ್‌ ಮೂಲಕ ಅಹವಾಲು ಸ್ವೀಕರಿಸುವ ಪ್ರಸ್ತಾಪ ಮುಂದಿಟ್ಟಿದೆ. ಇದು ಅವೈಜ್ಞಾನಿಕ ಪ್ರಕ್ರಿಯೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಈ ಯೋಜನೆಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶದ ಪರಿಸರ ಹಾಗೂ ಜೀವವೈವಿಧ್ಯಕ್ಕೆ ಹಾನಿಯಾಗಲಿದೆ. ಈ ಕುರಿತು ಎಲ್ಲಾ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವುದು ಅತ್ಯಗತ್ಯ. ಆದರೆ, ಇದಕ್ಕಾಗಿ ವೆಬಿನಾರ್‌ನಂಥ ವ್ಯವಸ್ಥೆಯನ್ನು ಉಪಯೋಗಿಸಿದರೆ, ಹಲವರಿಗೆ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಜೂಮ್‌ ಆ್ಯಪ್‌ ಮೂಲಕ ಮೂಲಕ ವೆಬಿನಾರ್‌ ನಡೆಸುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆಗೆ ಪರಿಹಾರವಾಗಿ 65 ಕಿ.ಮೀ. ಪೆರಿಫರಲ್‌ ರಸ್ತೆ ನಿರ್ಮಾಣದ ಪ್ರಸ್ತಾವನೆಯನ್ನು ಸರ್ಕಾರ ಮಾ.18ರಂದು ಸರ್ಕಾರ ಮಂಡಿಸಿತ್ತು. ಯೋಜನೆಯಿಂದಾಗಿ ಪರಿಸರದ ಮೇಲಾಗುವ ಪರಿಣಾಮದ ಕುರಿತು ಮತ್ತೊಮ್ಮೆ ವಿಸ್ತೃತವಾದ ವರದಿ ತಯಾರಿಸಲು ಸುಪ್ರೀಂ ಕೋರ್ಟ್‌ ಬಿಡಿಎಗೆ ಸೂಚಿಸಿದ್ದರಿಂದ ಯೋಜನೆ ವಿಳಂಬವಾಗಿತ್ತು.
ಯುಎನ್ಐ ಎಸ್ಎಚ್ 2151
More News
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆ: ತಗ್ಗಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆ: ತಗ್ಗಿದ ಸಕ್ರಿಯ ಪ್ರಕರಣಗಳ ಸಂಖ್ಯೆ

31 Oct 2020 | 9:39 PM

ಬೆಂಗಳೂರು, ಅ 31 (ಯುಎನ್‌ಐ) ರಾಜ್ಯದಲ್ಲಿ 3,014 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ.

 Sharesee more..