Wednesday, Feb 19 2020 | Time 12:23 Hrs(IST)
 • ಯ ಟಿ ಖಾದರ್ ಮೇಲೆ ದೇಶದ್ರೋಹ ಪ್ರಕರಣ: ವಿಧಾನಸಭೆಯಲ್ಲಿ ಗದ್ದಲ, ಕೋಲಾಹಲ
 • ಜಸ್ಪ್ರಿತ್ ಬುಮ್ರಾ ನ್ಯೂಜಿಲೆಂಡ್ ಗೆ ಆಘಾತ ನೀಡಬಲ್ಲರು: ರಾಸ್ ಟೇಲರ್
 • ದೆಹಲಿಯಲ್ಲಿ ಹೆಚ್ಚುತ್ತಿರುವ ಹನುಮಂತನ ಆರಾಧನೆ ; ಆಪ್ ಶಾಸಕರ ನೇತೃತ್ವದಲ್ಲಿ ಸುಂದರಕಾಂಡ ಪಾರಾಯಣ ಕೈಂಕರ್ಯ !!
 • ಕೊರೊನವೈರಸ್ ಪೀಡಿತ ಕ್ರೂಸ್ ಹಡಗಿನಿಂದ ಪ್ರಯಾಣಿಕರು ಇಂದು ಹೊರಕ್ಕೆ
 • ಸಚಿವರ ಗೈರು ಹಾಜರಿ: ಸಿದ್ದರಾಮಯ್ಯ ಆಕ್ಷೇಪ
 • ಕೊರೊನವೈರಸ್ ವಿರುದ್ಧದ ಹೋರಾಟದಲ್ಲಿ ಚೀನಾ ವೈದ್ಯ ಸಾವು: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರಿಂದ ಸಂತಾಪ
 • ಸಾಧನೆ ವಯಸ್ಸು ಅಡ್ಡಿಯಾಗದು ಎಂದು ತೋರಿಸಿದ ಶಿವಸುಬ್ರಮಣ್ಯನ್ !!
 • ರಿಯೋ ಓಪನ್‌: ಪ್ರೀ ಕ್ವಾರ್ಟರ್‌ ಫೈನಲ್ಸ್‌ಗೆ ಡೊಮಿನಿಚ್‌ ಥೀಮ್‌
 • ಚಿತ್ರೋತ್ಸವ; ಆನ್‌ಲೈನ್‌ ಜೊತೆಗೆ ಖುದ್ದು ನೋಂದಣಿಗೂ ಅವಕಾಶ
 • ಭಾರತದ ಜೊತೆ ವ್ಯಾಪಾರ ಒಪ್ಪಂದ: ಅನುಮಾನ ಹೊರಹಾಕಿದ ಅಧ್ಯಕ್ಷ ಟ್ರಂಪ್ !
 • ನ್ಯೂಜಿಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಯ ಸವಾಲಿಗೆ ನಾವು ಸಿದ್ಧ: ವಿರಾಟ್‌ ಕೊಹ್ಲಿ
 • ಕಣ್ಣು ದಾನದ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಅಭಿಯಾನ
 • ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಹಿಜ್ಬುಲ್ ಉಗ್ರರ ಹತ್ಯೆ
 • 65 ಕಿಮೀ ಮೈಲೆಜ್ ನೀಡುವ ಇ-ಸೈಕಲ್ಸ್ ಬಿಡುಗಡೆ
 • ಸಿಎಎ ಯಾರು ಆತಂಕ ಪಡಬೇಕಿಲ್ಲ: ಉದ್ದವಠಾಕ್ರೆ ಅಭಯ
Karnataka Share

ಎಂಡಿಎಸ್ ಶುಲ್ಕ ತಾರತಮ್ಯ; ನಾಲ್ಕು ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಆ 21 (ಯುಎನ್ಐ) ಸ್ನಾತಕೋತ್ತರ ದಂತ ವಿಜ್ಞಾನ ( ಎಂಡಿಎಸ್‌ ) ಸೀಟುಗಳ ಶುಲ್ಕ ತಾರತಮ್ಯಕ್ಕೆ ಸಂಬಂಧಿಸಿದ ದೂರುಗಳನ್ನು ನಾಲ್ಕು ವಾರಗಳಲ್ಲಿ ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ನಗರದ ಡಾ. ಕೆ.ಆರ್. ರವಿಕಿರಣ್ ಸೇರಿದಂತೆ ಒಟ್ಟು 13 ವೈದ್ಯರು ಸಲ್ಲಿಸಿದ್ದ ರಿಟ್ ಅರ್ಜಿಗಳ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿತು.
ಶುಲ್ಕ ನಿಗದಿಯಲ್ಲಿನ‌ ತಾರತಮ್ಯ ಸರಿಪಡಿಸುವಂತೆ ಕೋರಿ ಅರ್ಜಿದಾರರು ಸಲ್ಲಿಸುವ ಮನವಿಯನ್ನು ರಾಜ್ಯ ಸರ್ಕಾರ, ಕಾಲೇಜು ಆಡಳಿತ ಮಂಡಳಿ ಹಾಗೂ ವೃತ್ತಿಪರ ಶೈಕ್ಷಣಿಕ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಸಂಘ ಒಟ್ಟಾಗಿ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.

ಅರ್ಜಿದಾರರು, ಸರ್ಕಾರಿ ಕೋಟಾದಡಿ 2017-18ರ ಶೈಕ್ಷಣಿಕ ಸಾಲಿನಲ್ಲಿ ಮೆರಿಟ್ ಆಧಾರದಲ್ಲಿ ಎಂ.ಎಸ್‌.ರಾಮಯ್ಯ ಡೀಮ್ಡ್‌ ವಿಶ್ವವಿದ್ಯಾಲಯದ ಕಾಲೇಜಿನಲ್ಲಿ ಪ್ರವೇಶ ಪಡೆದ ಎಂಡಿಎಸ್‌ ವಿದ್ಯಾರ್ಥಿಗಳಿಗೆ ವಾರ್ಷಿಕ 6 ಲಕ್ಷ ರೂ. ಶುಲ್ಕ ನಿಗದಿಪಡಿಸಲಾಗಿತ್ತು. ಆದರೆ, 2018-19ನೇ ಸಾಲಿನಲ್ಲಿ ಅದನ್ನು 2.74 ಲಕ್ಷ ರೂ.ಗಳಿಗೆ ಇಳಿಕೆ ಮಾಡಲಾಗಿದೆ ಎಂದು ಆಕ್ಷೇಪಿಸಿದರು.
ಯುಎನ್ಐ ಎಸ್ಎಚ್ ಎಎಚ್ 2114