Saturday, Mar 28 2020 | Time 23:12 Hrs(IST)
 • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
 • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
 • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
 • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
 • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
 • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
 • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
 • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
 • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
 • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
 • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
 • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
 • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
 • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
 • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
Sports Share

ಐಎಸ್ಎಲ್: ಗೌರವ ಹಂಚಿಕೊಂಡ ಚೆನ್ನೈ, ನಾರ್ಥ್ ಈಸ್ಟ್

ಗುವಾಹಟಿ, ಫೆ.25 (ಯುಎನ್ಐ)- ಭರವಸೆಯ ಆಟಗಾರ ಲಲಿಯನ್ಜುವಾಲಾ ಚಾಂಗ್ಟೆ ಬಾರಿಸಿದ ಗೋಲಿನ ಸಹಾಯದಿಂದ ಚೆನ್ನೈಯಿನ್ ಎಫ್.ಸಿ 2-2 ರಿಂದ ನಾರ್ಥ್ ಈಸ್ಟ್ ಯುನೈಟೆಡ್ ತಂಡವನ್ನು ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯಲ್ಲಿ ಡ್ರಾ ಸಾಧಿಸಿದೆ.

ಚೆನ್ನೈ ಪರ ಮಾಸಿಹ್ ಸೈಘಾನಿ (17ನೇ ನಿಮಿಷ) ಲಲಿಯನ್ಜುವಾಲಾ (90ನೇ ನಿಮಿಷ) ಗೋಲು ಬಾರಿಸಿದರು. ನಾರ್ಥ್ ಈಸ್ಟ್ ಪರ ಮಾರ್ಟಿನ್ ಚೇವ್ಸ್ (43, 71ನೇ ನಿಮಿಷ) ಗೋಲು ಸಿಡಿಸಿದರು. ಚೆನ್ನೈಯಿನ್ ತಂಡ ಆಡಿದ 18 ಪಂದ್ಯಗಳಿಂದ 8 ಜಯ, 5 ಡ್ರಾ, 5 ಸೋಲುಗಳಿಂದ 29 ಅಂಕ ಕಲೆ ಹಾಕಿದೆ. ನಾರ್ಥ್ ಈಸ್ಟ್ ಇಷ್ಟೇ ಪಂದ್ಯಗಳಿಂದ 14 ಅಂಕ ಸೇರಿಸಿದ್ದು, ಒಂಬತ್ತನೇ ಸ್ಥಾನದಲ್ಲಿದೆ.

ಮೊದಲಾವಧಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಗೋಲು ಬಾರಿಸಿದವು. ಎರಡನೇ ಅವಧಿಯಲ್ಲಿ ನಾರ್ಥ್ ಈಸ್ಟ್ ತಂಡ 71ನೇ ನಿಮಿಷದಲ್ಲಿ ಗೋಲು ಸಿಡಿಸಿ ಅಂತರವನ್ನು ಹಿಗ್ಗಿಸಿತು. ಇದೇ ಅವಧಿಯಲ್ಲಿ ಚೆನ್ನೈ ತಂಡಕ್ಕೆ ಗೋಲು ನೀಡದಂತೆ ತಡೆಯುವಲ್ಲಿ ನಾರ್ಥ್ ತಂಡ ವಿಫಲವಾಯಿತು. ಪ್ರವಾಸಿ ತಂಡ ಈ ಅವಧಿಯ ಕೊನೆಯ ಕ್ಷಣದಲ್ಲಿ ಗೋಲು ಸಿಡಿಸಿ ಅಂಕವನ್ನು ಹಂಚಿಕೊಂಡಿತು.

ಯುಎನ್ಐ ವಿಎನ್ಎಲ್ 2158
More News

ಮಾಧ್ಯಮದ ಮೇಲೆ ಧೋನಿ ಪತ್ನಿ ಆಕ್ರೋಶ

28 Mar 2020 | 9:55 PM

 Sharesee more..

ತುರ್ತು ಯೋಜನೆಯ ಕೆಲಸ: ಐಸಿಸಿ

28 Mar 2020 | 9:45 PM

 Sharesee more..
ಸಂಸದ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡಿದ ರಿಜಿಜು

ಸಂಸದ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡಿದ ರಿಜಿಜು

28 Mar 2020 | 9:32 PM

ನವದೆಹಲಿ, ಮಾ.28 (ಯುಎನ್ಐ)- ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಕೊರೊನಾ ವೈರಸ್ ಪೀಡಿತರಿಗೆ ಸಹಾಯ ಮಾಡಲು ತಮ್ಮ ಎಂಪಿ ನಿಧಿಯಿಂದ 1 ಕೋಟಿ ರೂ.ಗಳ ಅನುದಾನವನ್ನು ಶನಿವಾರ ಪ್ರಕಟಿಸಿದ್ದಾರೆ.

 Sharesee more..