Saturday, Mar 28 2020 | Time 22:48 Hrs(IST)
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
  • ಕೋವಿಡ್ 19 : ಟಿಟಿಡಿಯಿಂದ 15 ಸಾವಿರ ಆಹಾರ ಪೊಟ್ಟಣ ವಿತರಣೆ
National Share

ಐದು ಐಐಐಟಿಗಳನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳೆಂದು ಘೋಷಿಸುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ

ನವದೆಹಲಿ, ಫೆಬ್ರವರಿ 5 (ಯುಎನ್‌ಐ) ದೇಶದಲ್ಲಿನ ಐದು ಐಐಐಟಿಗಳು ಮತ್ತು ಸದ್ಯ ಅಸ್ತಿತ್ವದಲ್ಲಿರುವ ಸರ್ಕಾರಿ-ಖಾಸಗಿ ಸಹಭಾಗಿತ್ವದ 15 ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳನ್ನು ‘ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ’ಗಳೆಂದು ಘೋಷಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಮಸೂದೆಯು ಸಂಸ್ಥೆಗಳಿಗೆ ಪದವಿಗಳನ್ನು ನೀಡುವ ಅಧಿಕಾರವನ್ನು ಒದಗಿಸಿಕೊಡಲಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2020 ರ ಭಾರತೀಯ ಮಾಹಿತಿ ತಂತ್ರಜ್ಞಾನ ಕಾನೂನುಗಳ (ತಿದ್ದುಪಡಿ) ಮಸೂದೆಗೆ ಮತ್ತು ಐಐಟಿಐಗಳಿಗೆ 21 ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡುವುದಕ್ಕೆ ಅನುಮತಿ ನೀಡಿದೆ.

ಸಚಿವ ಸಂಪುಟ ಸಭೆ ನಂತರ ಇಲ್ಲಿ ಸುದ್ದಿಗಾರರಿಗೆ ಸಭೆಯ ವಿವರಗಳನ್ನು ನೀಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ವಿಶ್ವವಿದ್ಯಾಲಯವೊಂದು ಇಲ್ಲವೇ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ನೀಡುತ್ತಿರುವ ಬ್ಯಾಚುಲರ್ ಆಫ್ ಟೆಕ್ನಾಲಜಿ (ಬಿ ಟೆಕ್) ಅಥವಾ ಮಾಸ್ಟರ್ ಆಫ್ ಟೆಕ್ನಾಲಜಿ (ಎಂ ಟೆಕ್) ಅಥವಾ ಪಿಎಚ್ ಡಿ ಪದವಿಗಳನ್ನು ಐಐಐಟಿ ಸಂಸ್ಥೆಗಳು ನೀಡುವುದಕ್ಕೆ ಮಸೂದೆ ಅವಕಾಶ ಮಾಡಿಕೊಡಲಿದೆ ಎಂದು ಹೇಳಿದರು.

ದೇಶದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಲವಾದ ಸಂಶೋಧನಾ ನೆಲೆಯನ್ನು ಅಭಿವೃದ್ಧಿಪಡಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳನ್ನು ಆಕರ್ಷಿಸಲು ಮಸೂದೆ ಸಂಸ್ಥೆಗಳಿಗೆ ಅನುವು ಮಾಡಿಕೊಡುತ್ತದೆ. ಮಸೂದೆಯು ಸೂರತ್, ಭೋಪಾಲ್, ಭಾಗಲ್ಪುರ್, ಅಗರ್ತಲಾ ಮತ್ತು ರಾಯಚೂರುಗಳಲ್ಲಿನ ಸರ್ಕಾರಿ- ಖಾಸಗಿ ಸಹಭಾಗಿತ್ವದ ಐದು ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡುತ್ತದೆ ಮತ್ತು ಇವುಗಳನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳೆಂದು ಘೋಷಿಸುತ್ತದೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದರು.

ಯುಎನ್ಐ ಎಸ್ಎಲ್ಎಸ್ 1753
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..