Sunday, Aug 9 2020 | Time 14:17 Hrs(IST)
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
 • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
 • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
Sports Share

ಐಪಿಎಲ್ ಗಾಗಿ ವಿಶ್ವ ಕಪ್ ಮುಂದೂಡಿಕೆ ಬಯಸುವುದಿಲ್ಲ: ಧುಮಾಲ್

ನವದೆಹಲಿ, ಮೇ 22 (ಯುಎನ್ಐ)
ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಮುಂದೂಡುವಂತೆ ಬಿಸಿಸಿಐ ಪ್ರಯತ್ನಿಸುವುದಿಲ್ಲ ಎಂದು ಮಂಡಳಿಯ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ. ಇದೇ ವೇಳೆ ವಿಶ್ವಕಪ್ ಮುಂದೂಡುವ ಪರಿಸ್ಥಿತಿ ಎದುರಾದರೆ ಅಕ್ಟೋಬರ್ -ನವೆಂಬರ್ ನಲ್ಲಿ ಐಪಿಎಲ್ ನಡೆಸಲು ಯೋಜಿಸಲಾಗುವುದು ಎಂದಿದ್ದಾರೆ.
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಧುಮಾಲ್, ವಿಶ್ವ ಕಪ್ ಮುಂದೂಡುವಂತೆ ಮಾಡಲು ಐಸಿಸಿ ಮೇಲೆ ಬಿಸಿಸಿಐ ಒತ್ತಡ ಹೇರುತ್ತಿದೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ಮಾಡಿರುವ ವರದಿಗೆ ಈ ಮೂಲಕ ತಿರುಗೇಟು ನೀಡಿದ್ದಾರೆ.
ಬಹುಕೋಟಿ ಮೊತ್ತದ ಐಪಿಎಲ್ ಟೂರ್ನಿ ಕೋವಿಡ್-19 ನಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಅಕ್ಟೋಬರ್ 18ರಿಂದ ಆರಂಭವಾಗಬೇಕಿರುವ ಟಿ20 ವಿಶ್ವ ಕಪ್ ಬಗ್ಗೆ ಇನ್ನೂ ಅನಿಶ್ಚಿತತೆ ಎದುರಾಗಿದೆ. ಹೀಗಾಗಿ ಮುಂದಿನ ವಾರ ನಡೆಯಲಿರುವ ಐಸಿಸಿ ಸಭೆಯಲ್ಲಿ ವಿಶ್ವ ಕಪ್ ಆಯೋಜನೆ ಕುರಿತು ವಿಸ್ತೃತ ಚರ್ಚೆ ನಡೆಯಲಿದ್ದು, ಈ ವೇಳೆ ಟೂರ್ನಿಯನ್ನು ಮುಂದೂಡುವಂತೆ ಬಿಸಿಸಿಐ ಒತ್ತಡ ಹೇರುವುದಿಲ್ಲ ಎಂದು ಧುಮಾಲ್ ಹೇಳಿದ್ದಾರೆ.
ಯುಎನ್ಐಆರ್ ಕೆ 1925