Monday, Jul 22 2019 | Time 07:08 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
Karnataka Share

ಐವರು ಮನೆಗಳ್ಳರ ಬಂಧನ

ಬೆಂಗಳೂರು, ಜುಲೈ 11 (ಯುಎನ್ಐ) ನಗರದ ಪಶ್ಚಿಮ ವಿಭಾಗದಲ್ಲಿ ಕಳ್ಳರ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಗುರುವಾರ ತಡರಾತ್ರಿ ಐವರನ್ನು ಬಂಧಿಸಿ, ಸುಮಾರು 1 ಕೆ.ಜಿ 417 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ವಿಜಯನಗರ, ಕಾಮಾಕ್ಷಿ ಪಾಳ್ಯ ಹಾಗೂ ಬಸವೇಶ್ವರನಗರ ಪ್ರದೇಶಗಳಲ್ಲಿ ಒಟ್ಟು ಐವರು ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ಮಹೇಶ್, ದಯಾನಂದ, ನಾಗೇಶ್, ಹೇಮರಾಜ್ ಎಂದು ಗುರುತಿಸಲಾಗಿದೆ.
ಪಶ್ಚಿಮ ವಿಭಾಗದಲ್ಲಿ ಮನೆಗಳ್ಳರ ಹಾವಳಿ ಹೆಚ್ಚಾಗಿದ್ದು, ಸುಮಾರು 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಪೊಲೀಸ್ ವಿಶೇಷ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಿತ್ತು.
ಸಿಸಿಟಿವಿ ಕ್ಯಾಮೆರಾ ಆಧರಿಸಿ ಐವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುಎನ್ಐ ಪಿಕೆ ಎಸ್ಎಚ್ 1437