Wednesday, Feb 26 2020 | Time 08:23 Hrs(IST)
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಒಡಿಶಾದಲ್ಲಿ ರಸ್ತೆ ಅಪಘಾತ: ಐವರು ಮಹಿಳಾ ಕೂಲಿ ಕಾರ್ಮಿಕರು ಸಾವು

ರೂರ್ಕೆಲಾ, ಜ 22(ಯುಎನ್‍ಐ)-ದುರ್ಘಟನೆಯೊಂದರಲ್ಲಿ ಕಾರೊಂದು ರಸ್ತೆ ವಿಭಜಕ ದಾಟಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಪರಿಣಾಮ ಐವರು ಮಹಿಳೆಯರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿಂದು ನಡೆದಿದೆ.
ಸುಂದರ್ ಗಡ್ ಜಿಲ್ಲೆಯ ರಾಜ್‍ರಂಗ್‍ಪುರ್ ಸಮೀಪ ರಮಬಹಾಲ್ ಚಾಕ್ ನ ಬಿಜು ಎಕ್ಸ್ ಪ್ರೆಸ್ ವೇ ನಲ್ಲಿ ಇಂದು ಈ ಘಟನೆ ನಡೆದಿದೆ.
ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ರೂರ್ಕೆಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಗಾಯಗೊಂಡ ಏಳು ಜನರನ್ನು ರೂರ್ಕೆಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದಾಗ ಕಾರು ಸುಂದರ್ ಗಡ್‍ನಿಂದ ರೂರ್ಕೆಲಾಗೆ ಸಾಗುತ್ತಿತ್ತು. ವೇಗವಾಗಿ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಕಾರ್‍ಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಕೆಲಸದಲ್ಲಿ ನಿರತರಾಗಿದ್ದ ಕೂಲಿ ಕಾರ್ಮಿಕರ ಮೇಲೆ ಹರಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1517