Friday, Feb 28 2020 | Time 09:01 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಒಮಾನ್ ದೊರೆ ಗೌರವಾರ್ಥ ನಾಳೆ ದೇಶಾದ್ಯಂತ ಶೋಕಾಚರಣೆ

ನವದೆಹಲಿ, ಜನವರಿ 12 (ಯುಎನ್ಐ) ಒಮಾನ್ ನ ದೊರೆ ಸುಲ್ತಾನ್ ಖಬೂಸ್ ಬಿನ್ ಸೈದ್ ಅವರ ನಿಧನದ ಗೌರವಾರ್ಥ ಕೇಂದ್ರ ಸರಕಾರ ಸೋಮವಾರ (ನಾಳೆ ) ಒಂದು ದಿನದ ಶೋಕಾಚರಣೆ ಘೋಷಿಸಿದೆ.
ಒಮಾನ್ ನ ದೊರೆ ಜನವರಿ 10ರಂದು ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.
ಅವರ ಗೌರವಾರ್ಥವಾಗಿ ಜನವರಿ 13ರಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆ ಮಾಡಲಾಗುವುದು ಭಾರತದಾದ್ಯಂತ ರಾಷ್ಟ್ರಧ್ವಜ ಅರ್ಧಮಟ್ಟಕ್ಕೆ ಹಾರಿಸಲಾಗುವುದು ಆ ದಿನ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಗೃಹ ಸಚಿವಾಲ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಸಚಿವಾಲಯ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುತ್ತೋಲೆ ಸಹ ಕಳುಹಿಸಿದೆ.
ಒಮಾನ್ ದೊರೆ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ದೊರೆ ನಿಜವಾಗಿ ಶಾಂತಿಯ ದ್ಯೋತಕವಾಗಿದ್ದರು ಎಂದೂ ಬಣ್ಣಿಸಿದ್ದಾರೆ.
ಯುಎನ್ಐ ಕೆಎಸ್ಆರ್ 1603