Wednesday, Feb 26 2020 | Time 09:09 Hrs(IST)
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಕಟ್ಟಡ ಕುಸಿತ: ಅವಶೇಷಗಳಡಿ ಸಿಲುಕಿದ ಅಗ್ನಿಶಾಮಕ ಸಿಬ್ಬಂದಿ

ನವದೆಹಲಿ ಜ, 2(ಯುಎನ್ಐ) ಬೆಂಕಿ ಅವಘಡ ಸಂಭವಿಸಿದ್ದ ಫ್ಯಾಕ್ಟರಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದು ಅನೇಕ ಅಗ್ನಿಶಾಮಕ ಸಿಬ್ಬಂದಿ ಅವಶೇಷಗಳಡಿ ಸಿಲುಕಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ, ಪೀರಗರ್ಹಿಯ ಫ್ಯಾಕ್ಟರಿಯೊಂದಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿತ್ತು. ಕೂಡಲೇ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಧಾವಿಸಿವೆ
ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ಹಲವು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.
ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳಕ್ಕೆ ದೆಹಲಿ ಪೊಲೀಸರು ಧಾವಿಸಿ , ಪರಿಶೀಲನೆ ನಡೆಸಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘಟನೆ ಕುರಿತು ಟ್ವೀಟ್ ಮಾಡಿ, ಅಗ್ನಿಶಾಮಕ ಸಿಬ್ಬಂದಿ ಬಹಳ ಶ್ರಮಪಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡಗಳಡಿ ಸಿಲುಕಿರುವವರು ಸುರಕ್ಷಿತವಾಗಿ ಹೊರಬರಲಿ ಎಂದೂ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಯುಎನ್ಐ ಕೆಎಸ್ಆರ್ 1208