Sunday, Aug 9 2020 | Time 14:37 Hrs(IST)
 • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
 • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
Karnataka Share

ಕಬ್ಬು ಬೆಳೆಗಾರರ ಬಾಕಿ ಮೊತ್ತ ಪಾವತಿಗೆ ಒತ್ತು ಕೊಡಿ: ಡಾ.ಹೆಚ್ ಆರ್ ಮಹಾದೇವ್

ಬೀದರ್, ಮೇ 23 (ಯುಎನ್‌ಐ) ಕಬ್ಬು ಬೆಳೆಗಾರರ ಬಾಕಿ ಮೊತ್ತ ಪಾವತಿಗೆ ಒತ್ತು ಕೊಡುವಂತೆ ಜಿಲ್ಲಾಧಿಕಾರಿ ಡಾ.ಹೆಚ್ ಆರ್ ಮಹಾದೇವ್ ಸೂಚನೆ ನೀಡಿದ್ದಾರೆ.
ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರ ಬಾಕಿ ಮೊತ್ತ ಪಾವತಿಸುವ ಸಂಬಂಧ ಜಿಲ್ಲಾಧಿಕಾರಿ ಡಾ|| ಹೆಚ್ ಆರ್ ಮಹಾದೇವ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿನ ವಿವಿಧ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಲಾಯಿತು.
2020-21ನೇ ಸಾಲಿನ ಹಂಗಾಮಿನ ಕಬ್ಬು ಬೆಳೆದ ರೈತರು ಸರಬರಾಜು ಮಾಡಿರುವ ಕಬ್ಬಿನ ಬಾಕಿ ಮೊತ್ತ ಕುರಿತಂತೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಚರ್ಚಿಸಿದರು.
2020-21ನೇ ಸಾಲಿನ ಹಂಗಾಮಿನ ಕಬ್ಬು ಬೆಳೆದ ರೈತರ ಬಾಕಿ ಮೊತ್ತವನ್ನು ಪೂರ್ಣವಾಗಿ ರೈತರಿಗೆ ಪಾವತಿಸಿದ್ದಾಗಿ ಮಹಾತ್ಮಾಗಾಂಧಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.
2020-21ನೇ ಸಾಲಿನ ಹಂಗಾಮಿಗೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಪಾವತಿ ಮಾಡಬೇಕಾದ ಒಟ್ಟು ಮೊತ್ತದಲ್ಲಿ ಈಗ 5 ಕೋಟಿಯನ್ನು ಈ ತಿಂಗಳ ಅಂತ್ಯದವರೆಗೆ ಪಾವತಿ ಮಾಡುವುದಾಗಿ ಸಭೆಗೆ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಮತ್ತು ಬೀದರ್ ಕಿಸಾನ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.
ಈ ತಿಂಗಳ ಅಂತ್ಯದವರೆಗೆ ತಮ್ಮ ಕಾರ್ಖಾನೆಯಿಂದ ಒಟ್ಟು ಮೊತ್ತದಲ್ಲಿ ಈಗ 4 ಕೋಟಿ ರೂ. ಪಾವತಿಸುವುದಾಗಿ ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರು ಸಭೆಗೆ ತಿಳಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ಬೀದರ ಜಿಲ್ಲೆಯಲ್ಲಿನ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ರೈತರಿಗೆ ಪಾವತಿ ಮಾಡಬೇಕಾದ ಮೊತ್ತವನ್ನು ಇತರೆ ಬ್ಯಾಂಕುಗಳಿಂದ ವ್ಯವಸ್ಥೆ ಮಾಡಿಕೊಂಡು ಸಂಬಂಧಿಸಿದ ರೈತರಿಗೆ ಮೇ ತಿಂಗಳಲ್ಲಿಯೇ ಹಣ ಪಾವತಿಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಬರುವ ಜೂನ್ 15 ರೊಳಗೆ ರೈತರ ಸಂಪೂರ್ಣ ಬಾಕಿ ಮೊತ್ತವನ್ನು ಪಾವತಿಸುವುದಾಗಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮತ್ತು ವ್ಯವಸಾಪಕ ನಿರ್ದೇಶಕರು ಸಭೆಗೆ ತಿಳಿಸಿದರು. ಸಕ್ಕರೆ ಕಾರ್ಖಾನೆಗಳಿಗೆ ಕಾಪು ದಾಸ್ತಾನು ಮತ್ತು ಜೆಸ್ಕಾಂನಿಂದ ಬಾಕಿ ಮೊತ್ತ ಕೂಡ ಬರಬೇಕಾದ ಕಾರಣ ರೈತರಿಗೆ ಹಣ ಪಾವತಿಸಲು ವಿಳಂಬವಾಗುತ್ತಿದೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರು ಸಭೆಯಲ್ಲಿ ಹೇಳಿದರು.
ಯುಎನ್‌ಐ ಯುಎಲ್ ಜಿಎಸ್ಆರ್ 2228
More News