Sunday, Mar 29 2020 | Time 00:32 Hrs(IST)
National Share

ಕರೋನವೈರಸ್ ಭೀತಿ: ನಾಗಾಲ್ಯಾಂಡ್ ಅಂತಾರಾಷ್ಟ್ರೀಯ ಗಡಿ ಬಂದ್

ಕೊಹಿಮಾ, ಫೆ 16 (ಯುಎನ್‌ಐ) ಕೊರೊನವೈರಸ್ ಭೀತಿ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್ ನಲ್ಲಿನ ಭಾರತ-ಮ್ಯಾನ್ಮಾರ್ ನಡುವಿನ ಅಂತಾರಾಷ್ಟ್ರೀಯ ಗಡಿ ದಾಟುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ನಾಗಾಲ್ಯಾಂಡ್ ಸರ್ಕಾರದ ನಿರ್ದೇಶನದಂತೆ ಮೋನ್ ಜಿಲ್ಲಾಧಿಕಾರಿ ತವಸೀಲನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಈ ತಿಂಗಳ 14 ರಂದು ಈ ಆದೇಶ ಹೊರಡಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಚೀನಾ ಮತ್ತು ಇತರ ದೇಶಗಳಲ್ಲಿ ಕರೋನಾವೈರಸ್ ಸೋಂಕು ಹರಡುತ್ತಿರುವುದು ಮತ್ತು ಈ ಸೋಂಕನ್ನು ವಿಶ್ವ ಆರೋಗ್ಯ ಸಂಸ್ಥೆ, ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಇದು ಅವಶ್ಯಕವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಮುಂದಿನ ಸೂಚನೆ ಬರುವವರೆಗೂ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದೇ ರಾಜ್ಯದಲ್ಲಿ ಕೆಲ ದಿನಗಳ ಹಿಂದೆ ಯಾವುದೇ ರೀತಿಯ ಬೇಟೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿತ್ತು. ಬೇಟೆಗಳಿಂದ ಪ್ರಾಣಿಗಳ ಮೂಲಕ ವೈರಸ್ ಹರಡಬಹುದು ಎಂಬ ಭೀತಿಯಿಂದ ಸರ್ಕಾರ ಕ್ರಮ ತೆಗೆದುಕೊಂಡಿತ್ತು.
ಯುಎನ್ಐ ಎಸ್ಎಲ್ಎಸ್ 1320
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..