Monday, Jun 1 2020 | Time 02:56 Hrs(IST)
Special Share

ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ

ಪಣಜಿ, ಮಾ 28 (ಯುಎನ್ಐ) ಗೋವಾದಲ್ಲಿ ಸಿಲುಕಿರುವ ಕರ್ನಾಟಕ ಯಾವುದೇ ಕಾರ್ಮಿಕರನ್ನು ತೆರವುಗೊಳಿಸಲು ಸರ್ಕಾರ ಮುಂದಾಗಿಲ್ಲ. ಈ ಸಂಬಂಧ ಮಾಧ್ಯಮಗಳು ಭಿತ್ತರಿಸುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗೋವಾ ಸರ್ಕಾರ ಇಲ್ಲಿನ ನಿವಾಸಿಗಳು ಹಾಗೂ ಕರ್ನಾಟಕದ ಜನರುವ ಕೂಡ ಸುರಕ್ಷಿತವಾಗಿರುವಂತೆ ನೋಡಿಕೊಳ್ಳಲು ಬದ್ಧವಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾವಹಿಸಿದೆ ಎಂದಿದ್ದಾರೆ.
ಕೊರೋನಾ ವೈರಸ್ ಸೋಂಕು ಹರಡದಂತೆ ಎಚ್ಚರವಹಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಇಂತಹ ಸುಳ್ಳು ಸುದ್ದಿಗಳಿಂದ ಪರಿಹಾರ ಕಾರ್ಯಗಳಿಗೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಕರ್ನಾಟಕದ ಮಾಧ್ಯಮಗಳು ಸುಳ್ಳು ಸುದ್ದಿ ಹರಡಿಸುವುದರಿಂದ ಹಿಂದೆ ಸರಿಯಬೇಕು ಎಂದು ಪ್ರಮೋದ್ ಸಾವಂತ್ ಸಲಹೆ ನೀಡಿದ್ದಾರೆ.
ಯುಎನ್ಐ ಎಸ್ಎಚ್ 1948