Wednesday, Feb 26 2020 | Time 10:25 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಕಲಬುರ್ಗಿ ಹತ್ಯೆ ಪ್ರಕರಣ; ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂಕೋರ್ಟ್

ನವದೆಹಲಿ, ಜ 17 (ಯುಎನ್ಐ) ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ ಅವರ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದೆಯೆಂಬ ಮಾಹಿತಿ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಪ್ರಕರಣವನ್ನು ಇತ್ಯರ್ಥಗೊಳಿಸಿದೆ.
ತಮ್ಮ ಪತಿಯ ಬರ್ಭರ ಹತ್ಯೆಯ ಕುರಿತು ಸಮಗ್ರ ತನಿಖೆಗೆ ಆದೇಶಿಸಬೇಕು ಎಂದು ಕಲಬುರ್ಗಿ ಅವರ ಪತ್ನಿ ಉಮಾದೇವಿ ಸಲ್ಲಿಸಿದ್ದ ಅರ್ಜಿ ಹಿನ್ನೆಲೆಯಲ್ಲಿ, ತನಿಖೆಯ ನಿಗಾ ವಹಿಸುತ್ತಿದ್ದ ನ್ಯಾಯಮೂರ್ತಿ ರೋಹಿಂಗ್ಟನ್ ಫಾಲಿ ನಾರಿಮನ್ ನೇತೃತ್ವದ ನ್ಯಾಯಪೀಠ, ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ವಿಲೇವಾರಿ ಮಾಡಲಾಗಿದೆ.
ವಿಚಾರವಾದಿ ಕಲಬುರ್ಗಿ ಪ್ರಕರಣಕ್ಕೆ ಸಂಬಂಧಿಸಿದಂತೆ 2015ರಲ್ಲೇ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ನ್ಯಾಯಪೀಠಕ್ಕೆ ಮಾಹಿತಿ ನೀಡಿತು.
ಪ್ರಕರಣದ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದು, ಈಗ ಪ್ರಕರಣವನ್ನು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ಪ್ರಗತಿ ವರದಿಯಲ್ಲಿ ತಿಳಿಸಲಾಗಿದೆ.
ಯುಎನ್ಐ ಎಸ್ಎಚ್ 1845