Wednesday, Feb 26 2020 | Time 10:33 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಎಫ್‌ಡಿಐಗೆ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ, ಜ.8 (ಯುಎನ್‌ಐ) ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಹೂಡಿಕೆ ಮಾಡುವ ಉದ್ದೇಶದಿಂದ, ಖನಿಜ ಕಾನೂನುಗಳ (ತಿದ್ದುಪಡಿ) ಸುಗ್ರೀವಾಜ್ಞೆ 2020ಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಈ ಸುಗ್ರೀವಾಜ್ಞೆಯು ಉಕ್ಕು ಮತ್ತು ವಿದ್ಯುತ್ ಹೊರತುಪಡಿಸಿ ಇತರ ಕ್ಷೇತ್ರಗಳಲ್ಲಿರುವ ಯಾವುದೇ ಕಂಪನಿಗೆ ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅನುಮತಿಸುತ್ತದೆ.
ವಿಶ್ವದ ನಾಲ್ಕನೇ ಅತಿದೊಡ್ಡ ಕಲ್ಲಿದ್ದಲು ನಿಕ್ಷೇಪವನ್ನು ಹೊಂದಿದ್ದರೂ, ಭಾರತವು ಕಳೆದ ವರ್ಷ 235 ದಶಲಕ್ಷ ಟನ್ (ಮೆ.ಟನ್) ಕಲ್ಲಿದ್ದಲನ್ನು ಆಮದು ಮಾಡಿಕೊಂಡಿತ್ತು, ಅದರಲ್ಲಿ 171,000 ಕೋಟಿ ರೂ. ಮೌಲ್ಯದ 135 ಮೆ.ಟನ್ ಆಂತರಿಕ ಮೀಸಲು ಆಗಿತ್ತು ಎಂದು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಸುದ್ದಿಗಾರರಿಗೆ ತಿಳಿಸಿದರು.
ಈ ಕ್ರಮದಿಂದ, ಭೂಗತ ಗಣಿಗಾರಿಕೆಗಾಗಿ ಜಾಗತಿಕ ಗಣಿಗಾರರು ಬಳಸುವ ಉನ್ನತ ಮಟ್ಟದ ತಂತ್ರಜ್ಞಾನದ ಪ್ರಯೋಜನ ಪಡೆಯಲು ಭಾರತಕ್ಕೆ ಸಹಾಯವಾಗಲಿದೆ.
ಸುಗ್ರೀವಾಜ್ಞೆಯಡಿಯಲ್ಲಿ, ಸಂಯೋಜಿತ ಉತ್ಖನನ ಪರವಾನಿಗೆ ಮತ್ತು ಗಣಿಗಾರಿಕೆ ಗುತ್ತಿಗೆಗಾಗಿ ಕಲ್ಲಿದ್ದಲು / ಕಂದು ಬಣ್ಣದ ಕಲ್ಲಿದ್ದಲು ಬ್ಲಾಕ್‌ಗಳ ಹಂಚಿಕೆಯನ್ನು ಒದಗಿಸಲಾಗಿದೆ; ಇದು ಯೋಜನೆಗಳ ಅನುಷ್ಠಾನ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ವ್ಯವಹಾರವನ್ನು ಸುಲಭಗೊಳಿಸುತ್ತದೆ, ಕಾರ್ಯವಿಧಾನವನ್ನು ಸರಳಗೊಳಿಸುತ್ತದೆ ಮತ್ತು ಖನಿಜಗಳು ಇರುವ ಪ್ರದೇಶಗಳಲ್ಲಿನ ಎಲ್ಲಾ ಪಕ್ಷಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಸರ್ಕಾರದ ವಕ್ತಾರರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


2018 ರಲ್ಲಿ ಎನ್‌ಡಿಎ ಸರ್ಕಾರವು ಖಾಸಗಿ ಸಂಸ್ಥೆಗಳ ವಾಣಿಜ್ಯ ಗಣಿಗಾರಿಕೆಗೆ ಅನುಮತಿ ನೀಡಿತ್ತು.

ಕೇಂದ್ರವು 2020 ರ ವೇಳೆಗೆ 1.5 ಬಿಲಿಯನ್ ಟನ್ ಗಣಿಗಾರಿಕೆ ಗುರಿಯನ್ನು ಹೊಂದಿತ್ತು.

ಕೇಂದ್ರ ಸಚಿವ ಸಂಪುಟ ಕಳೆದ ವರ್ಷ ಆಗಸ್ಟ್‌ನಲ್ಲಿ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಸ್ವಯಂಚಾಲಿತ ಮಾರ್ಗದಲ್ಲಿ ಶೇ. 100ರಷ್ಟು ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಮುಕ್ತ ಮಾರಾಟವನ್ನು ಘೋಷಿಸಿತ್ತು.
ಯುಎನ್ಐ ಎಎಚ್ 2022