Sunday, Mar 29 2020 | Time 00:42 Hrs(IST)
National Share

ಕಾಂಗ್ರೆಸ್ ತೆಕ್ಕೆಗೆ ಜಾರಿದ ಆಪ್ ಮುಖಂಡ

ನವದೆಹಲಿ, ಜ 20 (ಯುಎನ್‍ಐ) ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ಅಜ್ಮೇರಿ ಗೇಟ್ ಕೌನ್ಸಿಲರ್ ರಾಕೇಶ್ ಕುಮಾರ್ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಡಿಪಿಸಿಸಿ) ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಅವರನ್ನು ಕಾಂಗ್ರೆಸ್ ಮುಖಂಡರು ಬರಮಾಡಿಕೊಂಡರು.

ಡಿಪಿಸಿಸಿ ಮುಖ್ಯಸ್ಥ ಸುಬಾಶ್ ಚೋಪ್ರಾ, ಕಾಂಗ್ರೆಸ್ ವಕ್ತಾರ ಮುಖೇಶ್ ಶರ್ಮಾ, ಮಾಟಿಯಾ ಮಹಲ್ ವಿಧಾನಸಭಾ ಸ್ಥಾನದ ಪಕ್ಷದ ಅಭ್ಯರ್ಥಿ ಜಾವೇದ್ ಮಿರ್ಜಾ, ಜಿಲ್ಲಾಧ್ಯಕ್ಷ ಮೊಹಮ್ಮದ್ ಉಸ್ಮಾನ್, ಮಾಜಿ ಮುನ್ಸಿಪಲ್ ಕೌನ್ಸಿಲರ್ ಅಶೋಕ್ ಜೈನ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರಿದರು.

ಬಳಿಕ ಸುದ್ದಿಗಾರರೊಡನೆ ಮಾತನಾಡಿ, ದಿನಗಳೆದಂತ ವಿರೋಧ ಪಕ್ಷದ ಬಹಳಷ್ಟು ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ, ವಿಶೇಷವಾಗಿ ಎಎಪಿಯಿಂದ ಹಲವು ಮುಖಂಡರು ಹೊರಬರುತ್ತಿದ್ದಾರೆ ಎಂದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೆಎನ್‌ಯುಗೆ ಭೇಟಿ ನೀಡಲಿಲ್ಲ ಎಂದು ಟೀಕಿಸಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆಯೂ ದನಿಯೆತ್ತಿಲ್ಲ.

ಜಾಮಿಯಾ ಮತ್ತು ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ದಾಳಿ ವಿಷಯದಲ್ಲಿ ಕೇಜ್ರಿವಾಲ್ ಮೌನವನ್ನು ಗಮನಿಸಿದರೆ ಆಪ್ ಬಿಜೆಪಿ ಒಡನಾಟದಲ್ಲಿದೆ ಎಂಬುದು ಅರಿವಾಗುತ್ತದೆ ಎಂದು ಆರೋಪಿಸಿದ್ದಾರೆ.

ಯುಎನ್‍ಐ ಎಸ್‍ಎ ವಿಎನ್ 2310
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..