Wednesday, Feb 26 2020 | Time 10:45 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಕಾಂಗ್ರೆಸ್ ನಿಂದ ನಿರುದ್ಯೋಗ ನೋಂದಣಿ ಚಳವಳಿ

ನವದೆಹಲಿ, ಜ 23 (ಯುಎಎನ್ಐ) ದೇಶದ ಜನರಿಗೆ ಸತ್ಯ ಸಂಗತಿ ತಿಳಿಸಲು ಮನೆ, ಮನೆಗೆ ತೆರಳಿ ರಾಷ್ಟ್ರೀಯ ನಿರುದ್ಯೋಗ ನೋಂದಣಿ ಅಭಿಯಾನ ಆರಂಭಿಸುವುದಾಗಿ ಯುವಕಾಂಗ್ರೆಸ್ ಹೇಳಿದೆ.
ಜನಸಂಖ್ಯೆ ನೋಂದಣಿ(ಎನ್ಪಿಆರ್) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ)ಯ ಬಗ್ಗೆ ವಿವರಿಸಲು ಬಿಜೆಪಿ ರಾಷ್ಟ್ರದಾದ್ಯಂತ ಹಮ್ಮಿಕೊಂಡಿರುವ ಅಭಿಯಾನಕ್ಕೆ ಪ್ರತಿಯಾಗಿ ಈ ಅಭಿಯಾನ ನಡೆಸಲಾಗುವುದು ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಹೇಳಿದ್ದಾರೆ.

ನಿರುದ್ಯೋಗ ಪ್ರಮಾಣ ಹೆಚ್ಚುತ್ತಿರುವುದನ್ನು ಎತ್ತಿತೋರಿಸಲು ರಾಷ್ಟ್ರೀಯ ನಿರುದ್ಯೋಗ ನೋಂದಣಿ ಸಿದ್ಧಗೊಳಿಸುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಲು ಈ ಅಭಿಯಾನ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಭಾರತದ ಯುವಜನರ ಸಮಸ್ಯೆಗೆ ಧ್ವನಿಯಾಗುವ ಉದ್ದೇಶದಿಂದ ರಾಷ್ಟ್ರದಾದ್ಯಂತ ನಡೆಯುವ ಈ ಅಭಿಯಾನಕ್ಕೆ ಇಂದೇ ಚಾಲನೆ ದೊರಕಲಿದೆ.
ಮಿಸ್ಡ್ ಕಾಲ್ ನೀಡುವ ಮೂಲಕ ಅಥವಾ ಟೋಲ್ಪ್ರೀ ಸಂಖ್ಯೆಗೆ ಕರೆ ಮಾಡುವ ಮೂಲಕ ಪ್ರತಿಯೊಬ್ಬ ನಿರುದ್ಯೋಗಿ ಭಾರತೀಯರೂ ರಾಷ್ಟ್ರೀಯ ನಿರುದ್ಯೋಗ ನೋಂದಣಿಗೆ ಜತೆ ನಿಲ್ಲಬೇಕು ಎಂದು ಅವರು ಮನವಿ ಮಾಡಿದರು.
ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬರುವ ಮಂಗಳವಾರ ಈ ಅಭಿಯಾನಕ್ಕೆ ಕೈಜೋಡಿಸಲಿದ್ದಾರೆ ಎಂದರು.
ಯುಎನ್ಐ ಕೆಎಸ್ಆರ್ 2053