Wednesday, Feb 26 2020 | Time 10:27 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಕೋಟಾ ಮಕ್ಕಳ ಸಾವು ಪ್ರಕರಣ: ನ್ಯಾಯಾಂಗ ತನಿಖೆ ಕೋರಿ ಸುಪ್ರೀಂಗೆ ಅರ್ಜಿ

ನವದೆಹಲಿ, ಜ. 22 (ಯುಎನ್‌ಐ) ರಾಜಸ್ತಾನದ ಕೋಟಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 100ಕ್ಕೂ ಹೆಚ್ಚು ಮಕ್ಕಳ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ಕೋರಿ ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಕೆ.ಕೆ. ಅಗರ್‌ವಾಲ್ ಮತ್ತು ಸಾಮಾಜಿಕ ಕಾರ್ಯಕರ್ತರೊಬ್ಬರು ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮಕ್ಕಳನ್ನು ರಕ್ಷಿಸುವ ತನ್ನ ಕರ್ತವ್ಯವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಆದ್ದರಿಂದ ಈ ಸಾವುಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
21ನೇ ಶತಮಾನದ ಭಾರತದಲ್ಲಿ ನವಜಾತ ಶಿಶುಗಳ ಸಾವಿಗೆ ಕಾರಣವಾದ ಅಂಶಗಳು ಮತ್ತು ವೈಫಲ್ಯಗಳ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಸಮಗ್ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಂಬಂಧ, ಸಮರ್ಪಕ ಸೌಲಭ್ಯಕ್ಕೆ ಸಂಬಂಧಿಸಿದ ನೀತಿಗಳು ಮತ್ತು ಅತ್ಯಂತ ಅಗತ್ಯವಿರುವ ರೋಗಿಗಳಿಗೆ ವೈದ್ಯಕೀಯ ಉಪಕರಣಗಳನ್ನು ಒದಗಿಸುವ ಬಗ್ಗೆಯೂ ನಿರ್ದೇಶನ ನೀಡಬೇಕು ಅರ್ಜಿದಾರರು ಪ್ರಸ್ತಾಪಿಸಿದ್ದಾರೆ.
ಎಲ್ಲಾ ವೈದ್ಯಕೀಯ ಸಾಧನಗಳು ಸೇರಿದಂತೆ ಸಾಕಷ್ಟು ಮೂಲಸೌಕರ್ಯಗಳನ್ನು ಇರುವಂತೆ ನೋಡಿಕೊಳ್ಳುವ ಬಗ್ಗೆಯೂ ನಿರ್ದೇಶನ ನೀಡುವಂತೆಯೂ ಅರ್ಜಿದಾರರು ಒತ್ತಾಯಿಸಿದ್ದಾರೆ.
ಅರ್ಜಿಯು ಒಂದು ಅಥವಾ ಎರಡು ವಾರಗಳಲ್ಲಿ ವಿಚಾರಣೆಗೆ ಬರುವ ನಿರೀಕ್ಷೆಯಿದೆ ಎಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯ ಮೂಲಗಳು ತಿಳಿಸಿವೆ.
ಯುಎನ್ಐ ಎಎಚ್ 2100