Wednesday, Feb 26 2020 | Time 10:10 Hrs(IST)
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಕೇಂದ್ರ ಬಜೆಟ್, ಬಿಜೆಪಿ ಪದಾಧಿಕಾರಿಗಳ ಜೊತೆ ನಿರ್ಮಲಾ ಸಮಾಲೋಚನೆ

ಕೇಂದ್ರ ಬಜೆಟ್,  ಬಿಜೆಪಿ ಪದಾಧಿಕಾರಿಗಳ ಜೊತೆ  ನಿರ್ಮಲಾ  ಸಮಾಲೋಚನೆ
ಕೇಂದ್ರ ಬಜೆಟ್, ಬಿಜೆಪಿ ಪದಾಧಿಕಾರಿಗಳ ಜೊತೆ ನಿರ್ಮಲಾ ಸಮಾಲೋಚನೆ

ನವದೆಹಲಿ, ಜನವರಿ 9 (ಯುಎನ್‌ಐ) ಬರುವ ಫೆಬ್ರವರಿ 1 ರಂದು ಮಂಡಿಸಲಿರುವ ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಬಿಜೆಪಿ ಪದಾಧಿಕಾರಿಗಳು, ವಕ್ತಾರರರ ಜೊತೆ ಪಕ್ಷದ ಕಚೇರಿಯಲ್ಲಿ ಸಮಾಲೋಚನೆ ಮಾಡಿದ್ದಾರೆ.

ಆರ್ಥಿಕತೆಯ ವಿವಿಧ ಪಾಲುದಾರರು, ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ನಾಯಕರ ಸಲಹೆ ಕೋರಿದ್ದಾರೆ.

ಕೈಗಾರಿಕೆ , ಟ್ರೇಡ್, ಸ್ಟಾರ್ಟ್ಅಪ್, ಫಿನ್ಟೆಕ್ ಮತ್ತು ಡಿಜಿಟಲ್ ಸೆಕ್ಟರ್ ಮತ್ತು ನೀರು ಮತ್ತು ನೈರ್ಮಲ್ಯ ಕ್ಷೇತ್ರಗಳ ತಜ್ಞರೊಂದಿಗೆ ಅವರು ಬಜೆಟ್ ಪೂರ್ವಮಾತುಕತೆ ಮಾಡಿದ್ದಾರೆ .

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಒಂದು ವಾರದಿಂದ ದೇಶದ ಉನ್ನತ ಅರ್ಥಶಾಸ್ತ್ರಜ್ಞರು ಮತ್ತು ತಜ್ಞರನ್ನು ಭೇಟಿ ಮಾಡಿ ಆರ್ಥಿಕ ಸ್ಥಿತಿ ಮತ್ತು ಪ್ರಸಕ್ತ ಹಣಕಾಸು ವರ್ಷದಲ್ಲಿ ಆಬಿವೃದ್ಧಿ ದರ ಶೇಕಡಾ 5 ಕ್ಕೆ ಇಳಿಯಬಹುದೆಂದು ಅಂದಾಜಿಸಲಾಗಿರುವ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸುತ್ತಿದ್ದಾರೆ.

ಇದರ ಜೊತೆಗೆ , ಮೈಗೋವ್‌ನಲ್ಲಿ ಕೇಂದ್ರ ಬಜೆಟ್ 2020 ಗಾಗಿ ವಿಚಾರ ವಿನಿಮಯ ನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿದ್ದಾರೆ.

ಕೇಂದ್ರ ಬಜೆಟ್ 130 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿನಿಧಿಸಲಿದೆ ಮತ್ತು ಭಾರತದ ಅಭಿವೃದ್ಧಿಯ ಹಾದಿ ರೂಪಿಸಲಿದೆ . ಮೈಗೊವ್‌ನಲ್ಲಿನ ಈ ವರ್ಷದ ಬಜೆಟ್‌ಗಾಗಿ ನಿಮ್ಮ ಆಲೋಚನೆ, ಚಿಂತನೆ ಮತ್ತು ಸಲಹೆ ಹಂಚಿಕೊಳ್ಳಲು ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ಎಂದು ಮನವಿ ಮಾಡಿದ್ದಾರೆ .

ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಭೂಪೇಂದ್ರ ಯಾದವ್ ಮತ್ತು ಅರುಣ್ ಸಿಂಗ್ ಸಭೆಯಲ್ಲಿ ಭಾಗವಹಿಸಿದ್ದರು.

ಯುಎನ್‌ಐ ಕೆಎಸ್ಆರ್ 1725