Friday, Feb 28 2020 | Time 09:32 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಕೇಂದ್ರ ಸರ್ಕಾರದ ಜನವಿರೋಧಿ ನೀತಿ ತಡೆಗೆ ಎಲ್ಲರೂ ಒಗ್ಗೂಡಬೇಕು: ಸೋನಿಯಾ ಗಾಂಧಿ

ಕೇಂದ್ರ ಸರ್ಕಾರದ ಜನವಿರೋಧಿ ನೀತಿ ತಡೆಗೆ ಎಲ್ಲರೂ ಒಗ್ಗೂಡಬೇಕು: ಸೋನಿಯಾ ಗಾಂಧಿ
ಕೇಂದ್ರ ಸರ್ಕಾರದ ಜನವಿರೋಧಿ ನೀತಿ ತಡೆಗೆ ಎಲ್ಲರೂ ಒಗ್ಗೂಡಬೇಕು: ಸೋನಿಯಾ ಗಾಂಧಿ

ನವದೆಹಲಿ, ಜ 13 (ಯುಎನ್‍ಐ) ನಾಗರಿಕ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಕುರಿತು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮತ್ತು ಗೃಹ ಸಚಿವ ಅಮಿತ್ ಶಾ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆದೇಶದ ಆರ್ಥಿಕತೆ ಕುಸಿದಿದ್ದು, ಜನರ ಗಮನವನ್ನು ಅದರಿಂದ ಬೇರೆಡೆಗೆ ತಿರುಗಿಸಲು ಯತ್ತಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ರಾಷ್ಟ್ರವ್ಯಾಪಿ ನಡೆದ ಪ್ರತಿಭಟನೆಗಳ ಕುರಿತು ವಿರೋಧ ಪಕ್ಷಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಸೋನಿಯಾ, ಸರ್ಕಾರವು ದ್ವೇಷವನ್ನು ಹರಡುತ್ತಿದ್ದು, ರಾಷ್ಟ್ರವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಗುಡುಗಿದ್ದಾರೆಪ್ರಸ್ತುತ ದೇಶದೆಲ್ಲೆಡೆ, ಪ್ರಕ್ಷುಬ್ಧತೆಯಿದ್ದು, ಸಂವಿಧಾನವನ್ನು ದುರ್ಬಲಗೊಳಿಸಲಾಗುತ್ತಿದೆ. ಆಡಳಿತ ಯಂತ್ರದ ದುರುಪಯೋಗವಾಗುತ್ತಿದೆ. ಕುಸಿಯುತ್ತಿರುವ ಆರ್ಥಿಕತೆ ಹಾಗೂ ಬಡವರ ಏಳಿಗೆಯ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.ಯುಎನ್‍ಐ ಎಸ್‍ಎ ವಿಎನ್ 1847