Monday, Sep 21 2020 | Time 11:10 Hrs(IST)
  • ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ಕೊವಿಡ್‍-19: ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ 1,36,895 ಕ್ಕೆ ಏರಿಕೆ
  • ಬ್ರೆಜಿಲ್‌ನಲ್ಲಿ ಹೆದ್ದಾರಿ ಅಪಘಾತ: 12 ಮಂದಿ ಸಾವು
  • ಪ್ರೇಮಸೌಧ, ತಾಜ್ ಮಹಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ
  • ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ
  • ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು
Karnataka Share

ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ

ಬೆಂಗಳೂರು, ಆ.3(ಯುಎನ್ಐ) ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ನಾಯಕತ್ವ ಹಾಗೂ ಆಡಳಿತ ನಿರ್ವಹಣೆ ಕುರಿತು ಪಕ್ಷದ ಕಾರ್ಯಕರ್ತರಿಗೆ ತರಬೇತಿ ನೀಡಲು ಅಕಾಡೆಮಿ ಆಫ್ ಪೊಲಿಟಿಕಲ್ ಲೀಡರ್ ಶಿಪ್ ಆಂಡ್ಯ ಗೌವರ್ನೆನ್ಸ್ ಸಮಿತಿಯನ್ನು ರಚಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚಿಸಲಾಗಿದೆ.
ಸಮಿತಿಯಲ್ಲಿ ಮೇಲ್ಮನೆ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಯು.ಟಿ.ಖಾದರ್, ಡಾ. ಶರಣ ಪ್ರಕಾಶ್ ಪಾಟೀಲ್, ಸಂಸದರಾದ ಡಿ.ಕೆ.ಸುರೇಶ್, ಎಲ್. ಹನುಮಂತಯ್ಯ, ಸೈಯದ್ ನಾಸೀರ್ ಹುಸೇನ್, ಪ್ರೊ.ಕೆ. ಇ. ರಾಧಾಕೃಷ್ಣ, ಶಾಸಕಿ ಸೌಮ್ಯಾ ರೆಡ್ಡಿ, ರಾಜೀವ್ ಗಾಂಧಿ ರಾಜಕೀಯ ತರಬೇತಿ ಕೇಂದ್ರ ಉಡುಪಿ ಡಿಸಿಸಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಭರತ್ ಮುಂಡೋಡಿ, ಡಾ.ಲೋಹಿತ್ ನಾಯ್ಕರ್, ಮಂಜುನಾಥ ಅದ್ದೆ, ಸುಧೀರ್ ಕುಮಾರ್ ಮರೋಡಿ ಅವರನ್ನು ನೇಮಿಸಲಾಗಿದೆ.
ಸಂಯೋಜಕರಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮೋಹನ್ ಕುಮಾರ್ ಹಾಗೂ ನಿಖಿತಾ ರಾಜ್ ಅವರನ್ನು ನೇಮಿಸಲಾಗಿದೆ.
ವಿಶೇಷ ಅಹ್ವಾನಿತರಾಗಿ ಮಾಧ್ಯಮ ಘಟಕ, ಕಾನೂನು ಸುಧಾರಣಾ ಘಟಕ, ಮಾಹಿತಿ ತಂತ್ರಜ್ಞಾನ ಘಟಕ, ಸಾಮಾಜಿಕ ಜಾಲತಾಣ ಘಟಕ, ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕ ಹಾಗೂ ಸೇವಾ ದಳದ ಅಧ್ಯಕ್ಷರನ್ನು ಸೇರಿಸಲಾಗಿದೆ.
ಯುಎನ್ಐ ಯುಎಲ್ ಎಎಚ್ 2053