Monday, Jul 13 2020 | Time 04:14 Hrs(IST)
Special Share

ಕೇರಳದಲ್ಲಿ ಟ್ರಕ್ ಚಾಲಕನಿಂದ 10 ಜನರಿಗೆ ಕರೋನ ಸೋಂಕು

ತಿರುವನಂತಪುರ, ಮೇ 13(ಯುಎನ್ಐ) ಕೇರಳದಲ್ಲಿ ಬುಧವಾರ ಹೊಸದಾಗಿ 10 ಜನರಿಗೆ ಕರೊನ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಾಜಾ ತಿಳಿಸಿದ್ದಾರೆ.

ಮಲಪ್ಪುರಂ ಜಿಲ್ಲೆಯ ಮೂವರಿಗೆ, ವಯನಾಡ್ ಮತ್ತು ಪಾಲಕ್ಕಾಡ್ ಜಿಲ್ಲೆಯಿಂದ ಇಬ್ಬರಿಗೆ ಮತ್ತು ಕೊಟ್ಟಾಯಂ, ಕಣ್ಣೂರು ಮತ್ತು ಕೋಳಿಕೋಡ್ ಜಿಲ್ಲೆಗಳಿಂದ ತಲಾ ಒಬ್ಬೊಬ್ಬರಿಗೆ ಸೋಂಕು ತಗುಲಿರುವುದು ದೃಡಪಟ್ಟಿದೆ ಎಂದರು.
ಅವರಲ್ಲಿ ನಾಲ್ವರು ವಿದೇಶದಿಂದ ಮತ್ತು ಇಬ್ಬರು ಚೆನ್ನೈನಿಂದ ಬಂದವರು.ನಾಲ್ವರಿಗೆ ಸಂಪರ್ಕದ ಮೂಲಕ ಸೋಂಕು ತಗುಲಿದೆ ಎಂದರು. ವಯನಾಡ್ ಜಿಲ್ಲೆಯ ಇಬ್ಬರಿಗೆ ಸಂಪರ್ಕದ ಮೂಲಕ ಸೋಂಕು ಉಂಟಾಗಿರುವುದು ಚೆನ್ನೈನಿಂದ ಬಂದ ಟ್ರಕ್ ಚಾಲಕನಿಂದ. ಮಲಪ್ಪುರಂ ಜಿಲ್ಲೆಯ ಒಬ್ಬರು ಮತ್ತು ಕಣ್ಣೂರು ಜಿಲ್ಲೆಯ ಒಬ್ಬರು ವಯನಾಡಿನಲ್ಲಿ ಕರ್ತವ್ಯದಲ್ಲಿದ್ದ ಪೋಲಿಸರು. ಅವರಿಗೆ ಟ್ರಕ್ ಡ್ರೈವರ್ ಮೂಲಕ ಸೋಂಕು ತಗುಲಿದೆ ಇದರೊಂದಿಗೆ ಈ ಟ್ರಕ್ ಚಾಲಕರಿಂದ 10 ಜನರು ಸೋಂಕಿಗೆ ಒಳಗಾಗಿದ್ದಾರೆ.ಅದೇ ಸಮಯ ಕೊಲ್ಲಂ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೊಬ್ಬರು ತಪಾಸಣಾ ಫಲಿತಾಂಶ ಋಣಾತ್ಮಕವಾಗಿದೆ.
ಈವರೆಗೆ 490 ಜನರು ಕೋವಿಡ್ನಿಂದ ಗುಣಮುಖರಾಗಿದ್ದಾರೆ.ಪ್ರಸ್ತುತ 41 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 34,447 ಜನರು ನಿರೀಕ್ಷಣೆಯಲ್ಲಿದ್ದಾರೆ. ಈ ಪೈಕಿ 33,953 ಜನರು ಮನೆಗಳಲ್ಲಿ ಮತ್ತು 494 ಜನರು ಆಸ್ಪತ್ರೆಗಳಲ್ಲಿ ನಿರೀಕ್ಷಣದಲ್ಲಿರುವರು. ಒಟ್ಟು 168 ಜನರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿಯವರೆಗೆ, 39,380 ವ್ಯಕ್ತಿಗಳ (ಓಗ್ಮೆಂಟೆಡ್ ಮಾದರಿ ಸೇರಿದಂತೆ) ಮಾದರಿಯನ್ನು ಪರಿಶೀಲನೆಗಾಗಿ ಕಳುಹಿಸಲಾಗಿದೆ. ಇದರಲ್ಲಿ ಲಭ್ಯವಾದ 38,509 ಮಾದರಿಗಳ, ತಪಾಸಣಾ ಫಲಿತಾಂಶ ನಕಾರಾತ್ಮಕವಾಗಿವೆ, ರಾಜ್ಯದಲ್ಲಿ ಪ್ರಸ್ತುತ ಒಟ್ಟು 34 ಹಾಟ್ ಸ್ಪಾಟ್ಗಳಿವೆ ಎಂದೂ ಸಚಿವರು ಹೇಳಿದರು .
ಯುಎನ್ಐ ಕೆಎಸ್ಆರ್ .ವಿಎನ್ 2233
More News
ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

12 Jul 2020 | 8:41 PM

ಲಕ್ನೋ, ಜುಲೈ ೧೨ (ಯುಎನ್‌ಐ) ಭೂಗತ ಪಾತಕಿ ವಿಕಾಸ್ ದುಬೆ ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಾಸ್ತವಾಂಶಗಳ ಆಧಾರದ ಮೇಲೆ ಕ್ರಮ ಜರುಗಿಸಬೇಕು.

 Sharesee more..
ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್  ಸುರೇಶ್ ಕುಮಾರ್

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್ ಸುರೇಶ್ ಕುಮಾರ್

12 Jul 2020 | 6:42 PM

ಕುಕ್ಕೆ ಸುಬ್ರಮಣ್ಯ,ಜುಲೈ ೧೨(ಯುಎನ್ಐ) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಗಳು ಜುಲೈ ೧೮ ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

 Sharesee more..
ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ  ೨೦ ಚಿನ್ನದ  ಬಿಸ್ಕೆಟ್  !

ಅಜ್ಞಾತ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ೨೦ ಚಿನ್ನದ ಬಿಸ್ಕೆಟ್ !

12 Jul 2020 | 6:35 PM

ತಿರುಮಲ, ಜುಲೈ ೧೨(ಯುಎನ್‌ಐ) ತಿರುಮಲ- ತಿರುಪತಿ ದೇವಸ್ಥಾನ ಆಸ್ತಿ ಪಾಸ್ತಿಗಳ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿದ ನಂತರ ಶ್ವೇತ ಪತ್ರ ಪ್ರಕಟಿಸಲಾಗುವುದು ಎಂದು ಟಿಟಿಡಿ ಇ ಓ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ ತಿಳಿಸಿದ್ದಾರೆ.

 Sharesee more..
ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

ದೇಶದಲ್ಲಿ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಕೊರೊನಾ ಪೀಡಿತರು ಪತ್ತೆ

12 Jul 2020 | 6:19 PM

ನವದೆಹಲಿ, ಜುಲೈ 12 (ಯುಎನ್ಐ) ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ 28 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 8.50 ಲಕ್ಷದ ಸನಿಹ ತಲುಪಿದೆ.

 Sharesee more..
ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

ಕೋವಿಡ್: ಅಮಿತಾಬ್, ಅಭಿಷೇಕ್ ಆರೋಗ್ಯ ಸ್ಥಿರ

12 Jul 2020 | 6:11 PM

ಮುಂಬೈ, ಜು 12 (ಯುಎನ್ಐ) ಕೋವಿಡ್ ಸೋಂಕು ದೃಢಪಟ್ಟಿರುವ ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ, ನಟ ಅಭಿಷೇಕ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದ ನಾನಾವತಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

 Sharesee more..