Monday, Aug 3 2020 | Time 23:45 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Sports Share

ಕ್ರೀಡಾ ಸಂಹಿತೆ ಅನುಸರಿಸಲು ಎನ್ಎಸ್ ಎಫ್ ಗಳಿಗೆ ಕೋರ್ಟ್ ಸೂಚನೆ

ನವದೆಹಲಿ, ಜುಲೈ 3 (ಯುಎನ್ಐ)
ಕ್ರೀಡಾ ಸಂಹಿತೆಯನ್ನು ಅನುಸರಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳದೆ ದೇಶದ ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳಿಗೆ (ಎನ್‌ಎಸ್‌ಎಫ್) ತಾತ್ಕಾಲಿಕ ಮಾನ್ಯತೆ ನೀಡುವ ಅಭ್ಯಾಸವನ್ನು ಮುಂದುವರಿಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ದಿಲ್ಲಿ ಹೈಕೋರ್ಟ್ ಶುಕ್ರವಾರ ಹೇಳಿದೆ.
''ಕ್ರೀಡಾ ಸಂಹಿತೆ ಅನುಸರಿಸದ ಎನ್ಎಸ್ ಎಫ್ ಗಳಿಗೆ ತಾತ್ಕಾಲಿಕ ವ್ಯವಸ್ಥೆಯನ್ನು ಮುಂದುವರಿಸಲು ಅವಕಾಶ ಕಲ್ಪಿಸಲಾಗುವುದಿಲ್ಲ. ಎನ್ಎಸ್ ಎಫ್ ಗಳು ತಮ್ಮ ಮನೆಗಳನ್ನು ಕ್ರಮವಾಗಿ ಇರುವಂತೆ ನೋಡಿಕೊಳ್ಳಲು ಸೂಚಿಸಿ, '' ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ನಜ್ಮಿ ವಾಝಿರಿ ಅವರನ್ನೊಳಗೊಂಡ ಪೀಠ ಹೇಳಿದೆ.
ಮುಂದಿನ ವರ್ಷ ಒಲಂಪಿಕ್ ನಡೆಯಲಿರುವ ಕಾರಣ ಕ್ರೀಡಾಪಟುಗಳು ತರಬೇತಿ ಆರಂಭಿಸಬೇಕಾಗಿರುವ ಹಿನ್ನೆಲೆಯಲ್ಲಿ 57 ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳಿಗೆ ತಾತ್ಕಾಲಿಕ ವಾರ್ಷಿಕ ಮಾನ್ಯತೆ ನೀಡುವಂತೆ ಕೋರಿ ಕ್ರೀಡಾ ಸಚಿವಾಲಯ ಇತ್ತೀಚಿಗೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆಯ ವೇಳೆ ಪೀಠ ಈ ಹೇಳಿಕೆ ನೀಡಿದೆ.
ಇತ್ತೀಚೆಗಷ್ಟೇ ಕ್ರೀಡಾ ನೀತಿಯನ್ನು ಪಾಲಿಸದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕ್ರೀಡಾ ಕೂಟಗಳಿಗೆ ನೀಡಲಾಗಿದ್ದ ತಾತ್ಕಾಲಿಕ ಮಾನ್ಯತೆಯನ್ನು ಹಿಂಪಡೆಯುವಂತೆ ದಿಲ್ಲಿ ಹೈಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಕ್ರೀಡಾ ಸಚಿವಾಲಯವು ಮಾನ್ಯತೆಯನ್ನು ವಾಪಸ್ ಪಡೆದಿತ್ತು.
ಯುಎನ್ಐಆರ್ ಕೆ 1955