Sunday, Nov 1 2020 | Time 00:12 Hrs(IST)
National Share

ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು

ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು

ನವದೆಹಲಿ, ಸೆ 21 (ಯುಎನ್ಐ ) ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 1,130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 54,87,581ಕ್ಕೆ ಏರಿಕೆಯಾಗಿದೆ. ಈ ಪೈಕಿ ಒಟ್ಟಾರೆ 43,96,399 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 1,130 ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 87,882ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 10,03,299 ಸಕ್ರಿಯ ಪ್ರಕರಣಗಳಿವೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.

ಯುಎನ್ಐ ಕೆಎಸ್ಆರ್ 1036

More News

ಹಿರಿಯ ಪತ್ರಕರ್ತ ಡಿ ಕೆ ಜೋಶಿ ನಿಧನ

31 Oct 2020 | 6:42 PM

 Sharesee more..
ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಅಮಿತ್ ಶಾ ಗೌರವ

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಅಮಿತ್ ಶಾ ಗೌರವ

31 Oct 2020 | 3:58 PM

ನವದೆಹಲಿ, ಅ 31 (ಯುಎನ್ಐ) ದೇಶದ ಪ್ರಥಮ ಉಪ ಪ್ರಧಾನಿ ಮತ್ತು ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಗೌರವ ಸಲ್ಲಿಸಿದ್ದಾರೆ.

 Sharesee more..