Monday, Sep 21 2020 | Time 12:15 Hrs(IST)
 • ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ; ಹಾರಂಗಿ ಜಲಾಶಯದ ನೀರಿನ ಮಟ್ಟ ಏರಿಕೆ
 • ಕೊರೊನಾ ಆತಂಕದ ಮಧ್ಯೆ ವಿಧಾನಮಂಡಲ ಅಧಿವೇಶನ4 ಆರಂಭ: ಇತ್ತೀಚೆಗೆ ಮೃತರಾದ ಗಣ್ಯರಿಗೆ ಸಂತಾಪ
 • ಎತ್ತಿನ ಬಂಡಿ ಸಮೇತ ಇಬ್ಬರು ಯುವಕರು ನದಿ ಪಾಲು: ಮುಂದುವರೆದ ಶೋಧ ಕಾರ್ಯ
 • ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಯಡಿಯೂರಪ್ಪ
 • ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
 • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
 • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
 • ಕೊವಿಡ್‍-19: ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ 1,36,895 ಕ್ಕೆ ಏರಿಕೆ
 • ಬ್ರೆಜಿಲ್‌ನಲ್ಲಿ ಹೆದ್ದಾರಿ ಅಪಘಾತ: 12 ಮಂದಿ ಸಾವು
 • ಪ್ರೇಮಸೌಧ, ತಾಜ್ ಮಹಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ
 • ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ
 • ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು
Karnataka Share

ಕೊರೋನಾ, ಪ್ರವಾಹ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ : ಡಿ.ಕೆ.ಶಿವಕುಮಾರ್

ಮಡಿಕೇರಿ ಆ 9 [ಯುಎನ್ಐ] ರಾಜ್ಯದಲ್ಲಿ ಕೋರೋನಾ ಸಂಕಷ್ಟ ಮತ್ತು ಪ್ರವಾಹ ಪರಿಸ್ಥಿತಿಯನ್ನು ಸಮಥ೯ವಾಗಿ ನಿವ೯ಹಿಸುವಲ್ಲಿ ರಾಜ್ಯ ಸಕಾ೯ರ ಸಂಪೂಣ೯ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ರಾಜಕೀಯ ಪಕ್ಷ ಬೇಧ ಮರೆತು ಎಲ್ಲರೂ ಕೊಡಗಿನ ಹಾನಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಬೇಕು. ರಾಜ್ಯದ ಕಿರೀಟ ಪ್ರಾಯವಾಗಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ವಿಕೋಪ ಸಂಬಂಧ ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತ ಪರಿಹಾರ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿರುವ ಡಿ.ಕೆ. ಶಿವಕುಮಾರ್, ಸುದ್ದಿಗಾರರ ಜತೆ ಮಾತನಾಡಿ, ದೇಶಕ್ಕೆ ಅಪ್ರತಿಮ ಸೈನಿಕರನ್ನು ನೀಡಿದ, ಜೀವನದಿ ಕಾವೇರಿಯ ಉಗಮ ಜಿಲ್ಲೆಯ ಹಿತ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು. ಸರ್ಕಾರ ಈ ಕೂಡ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಾಡಿಗೆ ಮಳೆ ಅಗತ್ಯ. ಆದರೆ ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲೇಬೇಕಾಗಿದೆ. ಯಾವರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂಬ ಕುರಿತು ಸರ್ಕಾರ ಸ್ಪಷ್ಟ ಯೋಜನೆ ರೂಪಿಸಬೇಕು ಎಂದು ಹೇಳಿದರು.ಕಳೆದ ವಷ೯ ರಾಜ್ಯದಲ್ಲಿ ಸಂಭವಿಸಿದ ಪ್ರಾಕ?ತ್ತಿಕ ವಿಕೋಪ ಸಂತ್ರಸ್ಥರಿಗೇ ಇನ್ನೂ ರಾಜ್ಯ ಸಕಾ೯ರ ಭರವಸೆ ನೀಡಿದ್ದ ಪರಿಹಾರ ಬಿಡುಗಡೆ ಮಾಡಿಲ್ಲ. ಶಾಸಕರು, ಸಂಸದರಿಗೆ ಈ ಬಗ್ಗೆ ಪ್ರಶ್ನಿಸಲೂ ಸಾಧ್ಯವಾಗದ ಅಸಾಹಯಕ ಸ್ಥಿತಿಯಿದೆ. ಮಳೆ ಹಾನಿ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.

ಯುಎನ್ಐ ವಿಎನ್ 1231